ಕೊಲಂಬೋ : ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಭಾನುವಾರ ಸಂಜೆ ನಡೆದ ರೋಚಕ ಟಿ-20 ವಿಶ್ವ ಕಪ್ ಪಂದ್ಯದಲ್ಲಿ ಪಾಕ್ ವಿರುದ್ಧ ಭಾರತ ತಂಡ 61 ರನ್ ಗಳ ರೋಚಕ ಗೆಲುವು ಸಾಧಿಸಿ ಮಹಾ ಶಿವರಾತ್ರಿಗೆ ಗಿಫ್ಟ್ ನೀಡಿತು.
ಕೊಲಂಬೋದಲ್ಲಿನ ಪ್ರೇಮದಾಸ ಕ್ರೀಡಾಂಗಣದಲ್ಲಿ ಸಂಜೆ 7ಕ್ಕೆ ಆರಂಭವಾದ ಪಂದ್ಯದಲ್ಲಿ ಟಿ 20 ವಿಶ್ವಕಪ್ ಪಂದ್ಯದಲ್ಲಿ ಟಾಸ್ ವೇಳೆ ಭಾರತ ತಂಡದ ನಾಯಕ ಸೂರ್ಯಕುಮಾರ್ ಹಾಗೂ ಪಾಕಿಸ್ತಾನ ತಂಡದ ನಾಯಕ ಸಲ್ಮಾನ್ ಅಲಿ ಅವರು ಮತ್ತೊಮ್ಮೆ ಪರಸ್ಪರ ಕೈ ಕುಲುಕದೆ ಹೋದರು.
ಭಾರತದ ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು.
ಅದರಂತೆ ಭಾರತ ಮೊದಲು ಬ್ಯಾಟ್ ಮಾಡಿ 7 ವಿಕೆಟ್ ಕಳೆದುಕೊಂಡು 175 ರನ್ ಗಳಿಸಿತು.
ನಂತರ ಬ್ಯಾಟ್ ಮಾಡಿದ ಪಾಕಿಸ್ತಾನ ತಂಡ
ಎಲ್ಲಾ ವಿಕೆಟ್ ಒಪ್ಪಿಸಿ 114 ರನ್ ಗಳಿಸಿ ಸೋಲೊಪ್ಪಿತು.
ಬಂಗಾಳಕೊಲ್ಲಿಯ ಆಗ್ನೇಯ ಭಾಗದ ಸಮುದ್ರದಲ್ಲಿ ವಾಯು ಭಾರ ಕುಸಿಯುವ ಸಾಧ್ಯತೆ ಇದ್ದು ಮೋಡ ಮುಸುಕಿದ ವಾತಾವರಣ ಸೃಷ್ಟಿಯಾಗಿತ್ತು.ಸಂಜೆ ಮಳೆ ಸುರಿಯಬಹುದು ಎಂದು ಶ್ರೀಲಂಕಾದ ಹವಾಮಾನ ಇಲಾಖೆ ತಿಳಿಸಿತ್ತು.
ಸಧ್ಯ ಮಳೆ ಬಾರದ ಕಾರಣ ಕ್ರಿಕೆಟ್ ಅಭಿಮಾನಿಗಳು ಖುಷಿಯಿಂದ ಪಂದ್ಯ ವೀಕ್ಷಿಸಿದರು.
