ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಪಂಗಡಗಳಿಗೆ ಒಳ ಮೀಸಲಾತಿ ಕಲ್ಪಿಸಬೇಕು ಎಂಬ ಎಡಗೈ ಪಂಗಡದವರ 35 ವರ್ಷಗಳ ಹೋರಾಟಕ್ಕೆ ಕಡೆಗೂ ಜಯ ಸಿಕ್ಕಿದ್ದು ಸ್ವಾಗತಾರ್ಹ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಇದಕ್ಕೆ ಮಂತ್ರಿಮಂಡಲ ಒಪ್ಪಿಗೆ ನೀಡಿರುವುದು ಸ್ವಾಗತದ ಸಂಗತಿ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು,
ಈ ಮೂಲಕ ಎಲ್ಲಾ ಹೋರಾಟಗಾರರಿಗೂ ಪಕ್ಷದ ವತಿಯಿಂದ ಅಭಿನಂದನೆಗಳನ್ನು ಸಲ್ಲಿಸುತ್ತೇವೆ ಎಂದು ಹೆಳಿದರು.
ಸದಾಶಿವ ವರದಿ ಆಯೋಗವನ್ನು ಯಥಾವತ್ತಾಗಿ ಅಳವಡಿಸದ ಕಾರಣ ಅಲೆಮಾರಿ ಹಾಗೂ ಇನ್ನಿತರ ಧ್ವನಿ ಇಲ್ಲದ ಸಣ್ಣ ಸಣ್ಣ ಜಾತಿಗಳಿಗೆ ಒಳ ಮೀಸಲಾತಿಯ ಲಾಭ ದಕ್ಕುವುದಿಲ್ಲವೆಂಬ ಭಾವನೆ ಇದೆ,
ಮುಂಬರುವ ದಿನಗಳಲ್ಲಿ ಬಾಕಿ ಇರುವ ಎಲ್ಲ ನೇಮಕಾತಿಗಳು, ಮುಂಬಡ್ತಿಗಳು ವೇಗದಲ್ಲಿ ಆಗಬೇಕು ಎಂದು ಒತ್ತಾಯಿಸಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡಗಳು ಸಾಮಾಜಿಕವಾಗಿ ಆರ್ಥಿಕವಾಗಿ ಹಾಗೂ ಶೈಕ್ಷಣಿಕವಾಗಿ ಸಬಲೀಕರಣ ಗೊಳ್ಳಲು ಸರ್ಕಾರವು ಪರಿಶಿಷ್ಟರಿಗೆ ಮೀಸಲಿಟ್ಟಿರುವ ಹಣವನ್ನು ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರದಲ್ಲಿ ಆಮೂಲಾಗ್ರವಾಗಿ ಬದಲಾವಣೆ ತರಲು ಬಳಸಬೇಕು ಎಂದು ಮುಖ್ಯಮಂತ್ರಿ ಚಂದ್ರು ಸಲಹೆ ನೀಡಿದರು.
ಈ ಸಮಾಜದ ಮಕ್ಕಳಿಗೆ ವಿಶ್ವ ಗುಣಮಟ್ಟದ ಆಧುನಿಕ ಸರ್ಕಾರಿ ಶಿಕ್ಷಣ ವ್ಯವಸ್ಥೆಯನ್ನು ಕಲ್ಪಿಸುವಂತಹ ಯೋಜನೆಗಳು ಜಾರಿಯಾಗಬೇಕು ಎಂದು ಅವರು ತಿಳಿಸಿದರು.