ಬೆಂಗಳೂರು, ಸೆ.2: ರಾಮಾಯಣದಲ್ಲಿ ರಾಮನಿಗಿಂತ ಸೀತೆಯ ವ್ಯಕ್ತಿತ್ವ ಬಹಳ ದೊಡ್ಡದು ಆಕೆಯ ತ್ಯಾಗ, ಹೋರಾಟಗಳು ಮಾದರಿಯಾಗಿದೆ ಮಹಿಳೆಯರು ಸೃಷ್ಟಿಕರ್ತರು ಎಂದು ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಬಣ್ಣಿಸಿದರು.
ಎಫ್ ಕೆ ಸಿಸಿಐ ಸಭಾಂಗಣದಲ್ಲಿ ಬುಧವಾರ ನಡೆದ ಉಬುಂಟು ಸಂಸ್ಥೆಯ ಒಗ್ಗಟ್ಟಾಗಿ ಬೆಳೆಯೋಣ ಅಂತರರಾಷ್ಟ್ರೀಯ ಮಹಿಳಾ ಉದ್ಯಮಿಗಳ ದಿನದ 5 ನೇ ಆವೃತ್ತಿಯನ್ನು ಉದ್ಘಾಟಿಸಿ ಮಾತನಾಡಿದ ಸಿಎಂ,ಸವಾಲುಗಳನ್ನು ಮೆಟ್ಟಿ ಉದ್ದಿಮೆ ಕಟ್ಟಿರುವ ನೀವೂ ಮಾದರಿ ಎಂದು ಬಣ್ಣಿಸಿದರು.
ಗ್ರಾಮಪಂಚಾಯತಿ ಯಿಂದ ಸಂಸತ್ತಿನವರೆಗೆ ಮಹಿಳಾ ನಾಯಕತ್ವದ ಅಗತ್ಯವಿದ್ದು, ಮಹಿಳಾ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.
ನನಗೆ ಯುವಸಮೂಹ ಮತ್ತು ಮಹಿಳೆಯರ ಶಕ್ತಿಯ ಮೇಲೆ ಅಪಾರ ವಿಶ್ವಾಸವಿದೆ. ನಮ್ಮ ಸರ್ಕಾರ 5 ಗ್ಯಾರಂಟಿ ನೀಡುತ್ತಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರು ಸರ್ಕಾರಿ ಬಸ್ಸುಗಳಲ್ಲಿ ಉಚಿತವಾಗಿ ರಾಜ್ಯಾದ್ಯಂತ ಪ್ರಯಾಣಿಸುತ್ತಾರೆ. ಈ ಯೋಜನೆಯು ಮಹಿಳೆಯರಲ್ಲಿ ಆತ್ಮವಿಶ್ವಾಸ ಹಾಗೂ ಸ್ವಾವಲಂಬನೆಯನ್ನು ಹೆಚ್ಚಿಸಿದೆ. ಬಿಜೆಪಿ ಹಾಗೂ ಪ್ರಧಾನಿ ಮೋದಿಯವರು ಗ್ಯಾರಂಟಿಯೋಜನೆಗಳ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು. ಗೃಹಲಕ್ಷ್ಮಿ ಯೋಜನೆಯಡಿ ರಾಜ್ಯದ 1.22 ಕೋಟಿ ಮಹಿಳೆಯರಿಗೆ 2000 ರೂ. ದೊರೆಯುತ್ತಿದ್ದು, ಮಹಿಳೆಯರು ಕುಟುಂಬ ನಿರ್ವಹಣೆಗೆ ಆ ಹಣ ನೆರವಾಗಿದೆ ಎಂದು ಬಣ್ಣಿಸಿದರು.
“ನಮ್ಮ ಸರ್ಕಾರ ಶೇ. 4 ರಷ್ಟು ಬಡ್ಡಿದರದಲ್ಲಿ ಸಾಲಸೌಲಭ್ಯ, ಸಹಾಯಧನ, ಸ್ತ್ರೀಶಕ್ತಿ ಯೋಜನೆ ಸೇರಿದಂತೆ ಅನೇಕ ಮಹಿಳಾ ಆಧರಿತ ಯೋಜನೆಗಳನ್ನು ಜಾರಿಮಾಡಿದೆ. ಪ್ರತಿವರ್ಷ ತಯಾರಾಗುವ ವೈದ್ಯರ ಪೈಕಿ, ಶೇ. 40 ರಷ್ಟು ಮಹಿಳಾ ವೈದ್ಯರಿದ್ದಾರೆ. ನೀವು ಅಡುಗೆಮನೆಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರು ಉತ್ತಮ ಚಿಂತಕರು ಹಾಗೂ ಉದ್ಯಮಿಗಳು ಎಂದು ಶ್ಲಾಘಿಸಿದರು.
ಉಬುಂಟು ಮೂಲಕ ಸಾವಿರಾರು ಕನಸುಗಳು ಒಂದಾಗಿದ್ದು, ಎಲ್ಲರೂ ಒಗ್ಗಟ್ಟಾಗಿ ಬೆಳೆಯಬೇಕು. ಮಹಿಳೆಯರು ಕುಟುಂಬದ ನಿರ್ವಹಣೆಯ ಜೊತೆಗೆ ಯಾವುದೇ ಜವಾಬ್ದಾರಿಯನ್ನು ಅತ್ಯುತ್ತಮ ನಿಭಾಯಿಸಬಲ್ಲಳು ಎನ್ನುವುದು ಈಗಾಗಲೇ ನಿರೂಪಿತವಾಗಿದೆ ಎಂದು ಹೇಳಿದರು.
ಪುರಾಣಗಳಲ್ಲಿ ದ್ರೌಪದಿ ಹಾಗೂ ಕುಂತಿ ಮಹತ್ವದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ನಮ್ಮ ನಾಡದೇವತೆ ಚಾಮುಂಡೇಶ್ವರಿ, ನಮ್ಮ ಸಂಸ್ಕೃತಿಯಲ್ಲಿ ಗ್ರಾಮದೇವತೆಗಳು ಪ್ರಾಶಸ್ತ್ಯವಿದೆ, ನಿಮಗೆ ಉತ್ತಮ ಅವಕಾಶ, ಪ್ರತಿಭೆಯಿದ್ದು, ನೀವು ನಾಯಕರಾಗಬಹುದು ಎಂದು ಡ.ಕೆ.ಶಿವಕುಮಾರ್ ತಿಳಿಸಿದರು.
ಬೆಂಗಳೂರು ಮಹಾನಗರದಲ್ಲಿ ಸಂಚಾರದಟ್ಟಣೆ ನಿವಾರಣೆಗೆ ರೂಪಿಸಲಾಗಿರುವ ಟನೆಲ್ ಯೋಜನೆಗೆ ರಾಜಕೀಯ ಉದ್ದೇಶದಿಂದ ವಿರೋಧ ವ್ಯಕ್ತವಾಗುತ್ತಿದ್ದು, ಈ ಯೋಜನೆ ಜನರ ಸಮಯ, ಹಣವನ್ನು ಉಳಿಸಲಿದೆ. ಉದ್ಯಮಿಗಳಾಗಿರುವ ನೀವು, ಈ ಯೋಜನೆಯ ಪರವಾಗಿ ಧ್ವನಿಯೆತ್ತಬೇಕು ಎಂದು ಸಿಎಂ ಮನವಿ ಮಾಡಿದರು.
ನೂರು ಕೇಸ್ ದಾಖಲಿಸಿದರೂ ರಾಹುಲ್ ಗಾಂಧಿ ಹೆದರಲ್ಲ ಎಂದು ಸಿಎಂ ಡಿ ಕೆ ಶಿವಕುಮಾರ್ ಇದೇ ವೇಳೆ ಹೇಳಿದರು.
ಬೇರೆಯವರಂತೆ ರಾಹುಲ್ ಗಾಂಧಿ ಮುಚ್ಚಳಿಕೆ ಬರೆದುಕೊಡಲ್ಲ, ಕ್ಷಮೇನೂ ಕೇಳಲ್ಲ ಎಂದು ತಿಳಿಸಿದರು.
ಬಿಜೆಪಿಯ ಕೊನೆ ದಿನಗಳು ಆರಂಭವಾಗಿದೆ
ತಾವು ಮಾಡಿದ ಅನ್ಯಾಯ ಮರೆಮಾಚಲು ಬಿಜೆಪಿ ಪ್ರಾಯಶ್ಚಿತ ಯಾತ್ರೆ ಮಾಡುತ್ತಿದೆ
ಬಿಜೆಪಿ ಯಾತ್ರೆಗೆ ಕಾಂಗ್ರೆಸ್ ಪಕ್ಷದಿಂದ ತಕ್ಕ ಉತ್ತರ ಕೊಡುತ್ತೇವೆ ಎಂದು ಸಿಎಂ ಸ್ಪಷ್ಟಪಡಿಸಿದರು.
