ಬೆಂಗಳೂರು: ಕ್ರಿಕೆಟ್ ಪ್ರೇಮಿಗಳಿಗೆ ಸರ್ಕಾರ ಗುಡ್ ನ್ಯೂಸ್ ಕೊಟ್ಟಿದೆ.ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಕ್ರಿಕೆಟ್ ಆಡಲು ಗ್ರೀನ್ ಸಿಗ್ನಲ್ ಕೊಟ್ಟಿದೆ.
2025ರಲ್ಲಿ ಆರ್ಸಿಬಿ ಐಪಿಎಲ್ ಚೊಚ್ಚಲ ಟ್ರೋಫಿಗೆ ಗೆದ್ದ ಹಿನ್ನೆಲೆ ವಿಜಯೋತ್ಸವ ಆಚರಣೆ ವೇಳೆ ಎಂ.ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಮಂದಿ ಮೃತಪಟ್ಟಿದ್ದರು.
ಆಗಿನಿಂದ ಇಲ್ಲಿ ಯಾವುದೇ ಪಂದ್ಯ ನಡೆಸದಂತೆ ಆದೇಶ ಹೊರಡಿಸಲಾಗಿತ್ತು.ಅದರಂತೆ ಯಾವುದೇ ಮ್ಯಾಚ್ಗಳು ನಡೆದಿರಲಿಲ್ಲ.
ಆದರೆ,ಈಗ ರಾಜ್ಯ ಸರ್ಕಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಅನುಮತಿ ನೀಡಿದೆ. ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ.
ಐಪಿಎಲ್ 19ನೇ ಆವೃತ್ತಿಯು ಮಾರ್ಚ್ 26 ರಿಂದ ಆರಂಭ ಆಗಲಿದ್ದು, ಮೇ 31ರವರೆಗೆ ನಡೆಯಲಿದೆ.
