ಯಳಂದೂರು: ಯಳಂದೂರು ತಾಲೂಕಿನ ಹೊನ್ನೂರು ಗ್ರಾಮದ ಇಪೋ ಕ್ಯಾಂಪಸ್ ಶಾಲೆಯಲ್ಲಿ 80 ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.
ಶಾಲೆಯ ಮುಖ್ಯ ಶಿಕ್ಷಕಿ ಚಿದಂಬರ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಅಸಂಖ್ಯಾತ ಜನರ ಹೋರಾಟ ತ್ಯಾಗ, ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ. ಕರ್ನಾಟಕವು ಸ್ವಾತಂತ್ರ್ಯ. ಹೋರಾಟದಲ್ಲಿ ಮಹತ್ವದ ಪಾತ್ರ ವಹಿಸಿತ್ತು ಎಂದು ಹೇಳಿದರು.
ನಮ್ಮ ಇಪೋ ಕ್ಯಾಂಪಸ್ ಶಾಲೆಯಲ್ಲೂ ಗುಣಮಟ್ಟದ ಶಿಕ್ಷಣ, ಇಂಗ್ಲಿಷ್ ಶಿಕ್ಷಣ ದೊರೆಯುತ್ತಿದೆ.ಹಾಗಾಗಿ ನಮ್ಮ ಶಾಲೆಗೆ ಪ್ರತಿಯೊಬ್ಬರೂ ತಮ್ಮ ಮಕ್ಕಳನ್ನು ಸೇರಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಪುಟಾಣಿ ಮಕ್ಕಳು ನೃತ್ಯ ಪ್ರದರ್ಶನ ಮಾಡುವ ಮೂಲಕ ಸ್ವತಂತ್ರ ದಿನಚರಣೆ ಸಂಭ್ರಮ ಹೆಚ್ಚಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕಿ ಸೌಮ್ಯ , ಪುಟಾಣಿಗಳು ಸೇರಿದಂತೆ ಪೋಷಕರು ಮತ್ತಿತರರು ಹಾಜರಿದ್ದರು.
