ಕತಾರ್: ಮಧ್ಯಪ್ರಾಚ್ಯದಲ್ಲಿ ಯುದ್ಧ ತೀವ್ರಗೊಂಡಿದೆ. ಇರಾನ್ ಅಮೆರಿಕದ ಸ್ವತ್ತುಗಳನ್ನು ಗುರಿಯಾಗಿಸಿಕೊಂಡು ಇಂಧನ ಸೌಲಭ್ಯಗಳನ್ನು ಧ್ವಂಸಗೊಳಿಸಿದೆ.
ಇರಾನ್ ಇಂದು ಕತಾರ್ನ ಅತಿದೊಡ್ಡ ದ್ರವೀಕೃತ ನೈಸರ್ಗಿಕ ಅನಿಲ (ಎಲ್ಎನ್ಜಿ) ಸ್ಥಾವರವಾದ ರಾಸ್ ಲಫಾನ್ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.
ವಿಶ್ವದ ಅತಿದೊಡ್ಡ ಎಲ್ಎನ್ಜಿ ಸೌಲಭ್ಯದ ಮೇಲಿನ ದಾಳಿಯಿಂದಾಗಿ ಅಲ್ಲಿ ತೈಲದ ಉತ್ಪಾದನೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿದೆ.ಹಾಗಾಗಿ ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಅಲ್ಲೋಲ ಕಲ್ಲೋಲ ಉಂಟಾಗಿದೆ.
ಅಮೆರಿಕ, ಆಸ್ಟ್ರೇಲಿಯಾ ಮತ್ತು ರಷ್ಯಾದ ಜೊತೆಗೆ ಕತಾರ್ ವಿಶ್ವದ ಅಗ್ರ ಎಲ್ಎನ್ಜಿ ಉತ್ಪಾದಕರಲ್ಲಿ ಒಂದಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಕೂಡ ಇರಾನ್ ಕತಾರ್ನ ಅನಿಲ ಕ್ಷೇತ್ರಗಳ ಮೇಲೆ ಕ್ಷಿಪಣಿ ದಾಳಿಗಳನ್ನು ನಡೆಸಿದ್ದನ್ನು ಸ್ಮರಿಸಬಹುದು.
