ಕುವೈತ್: ಇರಾನ್ನ ವಿದ್ಯುತ್ ಸ್ಥಾವರಗಳನ್ನು ಧ್ವಂಸಗೊಳಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ ಬೆನ್ನಲ್ಲೇ ಕುವೈತ್ನ ಪ್ರಮುಖ ತೈಲ ಸಂಸ್ಕರಣಾಗಾರ ಮಿನಾ ಅಲ್-ಅಹ್ಮದಿ ಮೇಲೆ ಇರಾನ್ ಡ್ರೋನ್ ದಾಳಿ ನಡೆಸಿದೆ.
ಡ್ರೋನ್ ದಾಳಿಯ ನಂತರ ಕುವೈತ್ನ ರಾಷ್ಟ್ರೀಯ ತೈಲ ಕಂಪನಿ ಮಿನಾ ಅಲ್-ಅಹ್ಮದಿ ಘಟಕಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ಕುವೈತ್ ಪೆಟ್ರೋಲಿಯಂ ಕಾರ್ಪೊರೇಷನ್ ಮಿನಾ ಅಲ್-ಅಹ್ಮದಿ ಸಂಸ್ಕರಣಾಗಾರವನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಲಾಗಿದೆ.
ಇದರಿಂದಾಗಿ ಹಲವಾರು ಘಟಕಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರ್ಮಿಕರ ಸುರಕ್ಷತೆಗೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ.
