ಇರಾನ್: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ ಎಂದು ಇರಾನ್ ನ ನೂತನ ಪರಮೋಚ್ಛ ನಾಯಕ
ಮಜ್ತೋಬ ಖಮೇನಿ ಕಠಿಣ ಎಚ್ಚರಿಕೆ ನೀಡಿದ್ದಾರೆ.
ಇರಾನ್ನ ಹೊಸ ಸರ್ವೋಚ್ಚ ನಾಯಕನಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಸಂದೇಶ ರವಾನಿಸಿರುವ ಮೊಜ್ತಬಾ ಖಮೇನಿ, ಅಮೆರಿಕ ಮತ್ತು ಇಸ್ರೇಲ್ಗೆ ಎಚ್ಚರಿಕೆ ನೀಡಿದ್ದಾರೆ.
ಇತ್ತೀಚಿನ ದಾಳಿಗಳಲ್ಲಿ ಮೃತಪಟ್ಟ ಇರಾನಿಯನ್ನರ ಸಾವಿಗೂ ಅದರಲ್ಲೂ ಮಕ್ಕಳ ಮೇಲಿನ ಸಾವಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ,
ಇರಾನ್ ತನ್ನ ಹುತಾತ್ಮರ ರಕ್ತದ ಸೇಡು ತೀರಿಸಿಕೊಳ್ಳುವುದರಿಂದ ಹಿಂದೆ ಸರಿಯುವುದಿಲ್ಲ. ಇದೇ ನಮಗೆ ಪ್ರಮುಖ ಆದ್ಯತೆ ಎಂದು ಖಮೇನಿ ತಿಳಿಸಿದ್ದಾರೆ.
ಪ್ರತೀಕಾರ ಈಗಾಗಲೇ ಪ್ರಾರಂಭವಾಗಿದೆ. ಆದರೆ ಅದು ಸಂಪೂರ್ಣವಾಗಿ ಪೂರ್ಣಗೊಳ್ಳುವವರೆಗೆ ಬಿಡುವುದಿಲ್ಲ ಎಂದು ತಮ್ಮ ಸಂದೇಶದಲ್ಲಿ ಮೊಜ್ತಬಾ ಖಮೇನಿ ಸ್ಪಷ್ಟ ನುಡಿಗಳಲ್ಲಿ ಹೇಳಿದ್ದಾರೆ.
ಅಗತ್ಯವಿದ್ದರೆ,ಸಂಘರ್ಷ ತೀವ್ರ ಗೊಳ್ಳಬಹುದು, ಇದು ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಬಹುದು ಎಂದು ಅವರು ಎಚ್ಚರಿಸಿದ್ದಾರೆ.
ಇರಾನ್ ವಿರುದ್ಧ ದಾಳಿ ನಡೆಸಲಾಗುತ್ತಿರುವ ನೆರೆಯ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳನ್ನು ಗುರಿಯಾಗಿಸಿ ದಾಳಿ ಮುಂದುವರಿಯಲಿದೆ ಎಂದು ಮಜ್ತೊಬಾ ಖಮೇನಿ ತಿಳಿಸಿದ್ದಾರೆ.
