ಟೆಲ್ ಅವೀವ್: ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಇರಾನ್ ಮೇಲೆ ಇಸ್ರೇಲ್ ಭಯಾನಕ ದಾಳಿ ನಡೆಸುತ್ತಿದ್ದು,ಭಾರೀ ಸಾವು ನೋವು ಉಂಟಾಗಿದೆ.
ಇರಾನ್‌ನ ಇಂಧನ ಕೈಗಾರಿಕೆ ಮತ್ತು ರಕ್ಷಣಾ ಸಚಿವಾಲಯವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ.
ಇದಕ್ಕೆ ಪ್ರತಿಯಾಗಿ ಇರಾನ್ ಕೂಡಾ ಕ್ಷಿಪಣಿ ದಾಳಿ ನಡೆಸಿದೆ.
ಇರಾನ್‌ನ ವೇಗವಾಗಿ ವೃದ್ಧಿಗೊಳ್ಳುತ್ತಿದ್ದ ಪರಮಾಣು ಶಕ್ತಿಯನ್ನು ನಾಶಮಾಡಲು ಎರಡು ದಿನಗಳ ಹಿಂದೆ ಇಸ್ರೇಲ್ ನಡೆಸಿದ ಹಠಾತ್ ದಾಳಿ ಬಳಿಕ ಸಂಘರ್ಷ ಮತ್ತೆ ಬಿಗಡಾಯಿಸಿದೆ. ಈ ದಾಳಿಯಲ್ಲಿ ಇರಾನ್‌ನ ಮೂವರು ಪರಮಾಣು ವಿಜ್ಞಾನಿಗಳು ಮೃತಪಟ್ಟಿದ್ದಾರೆ.
ಈ ದಾಳಿಯಲ್ಲಿ ಇಸ್ರೇಲ್‌ನ ಗಲಿಲೀ ಅಪಾರ್ಟ್‌ಮೆಂಟ್ ಕಟ್ಟಡದಲ್ಲಿ ನಾಲ್ಕು ಜನರು ಸಾವಿಗೀಡಾಗಿದ್ದಾರೆ. ಇದರ ಬೆನ್ನಲ್ಲೇ ಇಸ್ರೇಲ್ ಸಹ ಟೆಹ್ರಾನ್ ಮೇಲೆ ಪ್ರತಿದಾಳಿ ನಡೆಸಿದೆ. ಟೆಹ್ರಾನ್‌ನಲ್ಲಿರುವ ರಕ್ಷಣಾ ಸಚಿವಾಲಯದ ಪ್ರಧಾನ ಕಚೇರಿಯನ್ನು ಮತ್ತು ದೇಶದ ಪರಮಾಣು ಕಾರ್ಯಕ್ರಮಕ್ಕೆ ಸಂಬಂಧಿಸಿದ ಸ್ಥಳಗಳನ್ನು ಗುರಿಯಾಗಿಸಿಕೊಂಡು ಇಸ್ರೇಲ್ ದಾಳಿ ನಡೆಸಿದೆ.ಇಲ್ಲೂ ಸಾಕಷ್ಟುಸಾವು ನೋವು ಆಗಿದೆ.
ಟೆಹ್ರಾನ್ ಹೊತ್ತಿ ಉರಿಯುತ್ತಿದೆ ಎಂದು ಇಸ್ರೇಲ್ ರಕ್ಷಣಾ ಸಚಿವ ಇಸ್ರೇಲ್ ಕಾಟ್ಸ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.