ಇರಾನ್, ಟೆಲ್ ಅವಿವ್: ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಅವರು ಮೃತಪಟ್ಟಿದ್ದಾರೆ.
ಇರಾನ್ ನ ಪರಮಾಣು ಸ್ಥಾವರಗಳು ಮತ್ತು ಮಿಲಿಟರಿ ನೆಲೆಗಳ ಮೇಲೆ ಶುಕ್ರವಾರ ಇಸ್ರೇಲ್ ದಾಳಿ ನಡೆಸಿದ್ದು, ದಾಳಿಯಲ್ಲಿ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಮುಖ್ಯಸ್ಥ ಜನರಲ್ ಹುಸೇನ್ ಸಲಾಮಿ ಅವರು ಸಾವನ್ನಪ್ಪಿದ್ದಾರೆ.
ರೆವಲ್ಯೂಷನರಿ ಗಾರ್ಡ್ಸ್, ಇರಾನ್ ದೇಶದ ಶಕ್ತಿಕೇಂದ್ರ ಎಂದು ಬಿಂಬಿತವಾಗಿದೆ. ಹಾಗಾಗಿ, ಇದನ್ನೇ ಕೇಂದ್ರೀಕರಿಸಿ ಇಸ್ರೇಲ್ ದಾಳಿ ನಡೆಸಿದ್ದು, ಇರಾನ್ ದೊಡ್ಡ ಪೆಟ್ಟು ಬಿದ್ದಂತಾಗಿದೆ.
ಸಲಾಮಿ ಆರು ವರ್ಷಗಳ ಹಿಂದೆ ಅಧಿಕಾರಕ್ಕೆ ಬಂದಿದ್ದರು ಮತ್ತು ಅಮೆರಿಕ ಹಾಗೂ ಇಸ್ರೇಲ್‌ಗೆ ಬೆದರಿಕೆ ಒಡ್ಡಿ ಹೆಸರಾಗಿದ್ದರು. ಹಾಗಾಗಿ, ಉದ್ದೇಶಪೂರ್ವಕವಾಗಿಯೇ ಇಸ್ರೇಲ್ ಅವರನ್ನು ಟಾರ್ಗೆಟ್ ಮಾಡಿದೆ.
1979ರ ಇಸ್ಲಾಮಿಕ್ ಕ್ರಾಂತಿಯ ನಂತರ ರೆವಲ್ಯೂಷನರಿ ಗಾರ್ಡ್ಸ್ ಅಸ್ತಿತ್ವಕ್ಕೆ ಬಂದಿತ್ತು. ಇದಾದ ನಂತರ, ಇದು ದೇಶೀಯ ಭದ್ರತಾ ಪಡೆಯಾಗಿ ಮುಂದುವರಿಯಿತು.