ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ: ಶೀಘ್ರ ದರ್ಶನ್ ಬೇರೆ ಜೈಲಿಗೆ ಶಿಫ್ಟ್

Spread the love

ಬೆಂಗಳೂರು: ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಮತ್ತು ವಿಲ್ಸನ್ ಗಾರ್ಡನ್ ನಾಗನ ಫೋಟೋ ವೈರಲ್ ಆದ ಬೆನ್ನಲ್ಲೇ ಇಬ್ಬರನ್ನೂ ಬೇರೆ ಜೈಲಿಗೆ ಕಳಿಸಲು ಸಿದ್ಧತೆ ನಡೆದಿದೆ.

ಒಂದೆರಡು ದಿನದೊಳಗೆ ಬಳ್ಳಾರಿ ಅಥವಾ ಬೆಳಗಾವಿ ಜೈಲಿಗೆ ದರ್ಶನ್ ನನ್ನು ಸ್ಥಳಾಂತರ ಮಾಡಲು ಅಧಿಕಾರಿಗಳು ನಿರ್ಧರಿಸಿದ್ದು ಇಬ್ಬರನ್ನು ಸ್ಥಳಾಂತರ ಮಾಡುವ ಸಂಬಂಧ ಅಧಿಕಾರಿಗಳು ಸಭೆ ನಡೆದಿದೆ.

ಫೋಟೋ ವೈರಲ್ ಆದ ಬೆನ್ನಲ್ಲೇ ಸರ್ಕಾರ ಈಗಾಗಲೇ 7 ಮಂದಿಯನ್ನು ಅಮಾನತು ಮಾಡಿದೆ.