ಬೆಂಗಳೂರು: ಜನವರಿ 22 ರಿಂದ ಹತ್ತು ದಿನಗಳು ಜಂಟಿ ಅಧಿವೇಶನ ನಡೆಯಲಿದ್ದು, ನರೇಗಾ ಯೋಜನೆ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ,
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಮತ್ತು ನರೇಗಾ ಯೋಜನೆ ಬದಲಾವಣೆಯ ಬಗ್ಗೆ ವಿಶೇಷ ಚರ್ಚೆ ನಡೆಯಲಿದೆ. ಅಧಿವೇಶನದ ನಂತರ ಆಯವ್ಯಯದ ಸಿದ್ಧತೆ ಪ್ರಾರಂಭಿಸಲಾಗುವುದು ಎಂದು ಹೇಳಿದರು.
ನವದೆಹಲಿಗೆ ಭೇಟಿ ನೀಡುವಿರ ಎಂಬ ಪ್ರಶ್ನೆಗೆ,ಪ್ರತಿಕ್ರಿಯಿಸಿದ ಸಿದ್ದರಸಮಯ್ಯ, ವರಿಷ್ಠರು ಕರೆ ನೀಡಿದರೆ ಹೋಗುತ್ತೇನೆ ಎಂದು ತಿಳಿಸಿದರು.
ಡಿಜಿಪಿ ರಾಮಚಂದ್ರರಾವ್ ಅವರ ಅನುಚಿತ ವರ್ತನೆ ವಿರುದ್ಧ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ, ಅವರ ವಿರುದ್ಧ ಶಿಸ್ತು ಕ್ರಮ ಜರುಗಿಸಿ,ಅಮಾನತ್ತು ಗೊಳಿಸಲಾಗಿದೆ ಎಂದು ಉತ್ತರಿಸಿದರು.
