ಮೈಸೂರು: ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಭಾಜನರಾಗಿ ಚಿನ್ನದ ಪದಕ ಸ್ವೀಕರಿಸಿದ ಸಿ ಎ ಆರ್ ಹೆಡ್ ಕಾನ್ಸ್ಟೇಬಲ್ ಜಯಕುಮಾರ್ ಅವರಿಗೆ ಮೈಸೂರಿನಲ್ಲಿ ಸನ್ಮಾನಿಸಲಾಯಿತು.
ಶಾರದಾದೇವಿ ನಗರದಲ್ಲಿರುವ ಮುಖ್ಯಮಂತ್ರಿಗಳ ನಿವಾಸದಲ್ಲಿ ಕೆಪಿಸಿಸಿ ಸದಸ್ಯರಾದ ನಜಬಾದ್ ನಟರಾಜ್, ರಮೇಶ್. ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷರಾದ ವಿನಯ್ ಕುಮಾರ್, ರಾಜೇಶ್, ರಾಜು ಕುಪ್ರಳ್ಳಿ, ಸ್ವಾಮೀಜಿ ಅವರು
ಜಯಕುಮಾರ್ ಅವರಿಗೆ ಶಾಲು ಹೊದಿಸಿ ಹಾರಹಾಕಿ ಅಭಿನಂದನೆ ಸಲ್ಲಿಸಿ ಶುಭ ಕೋರಿದರು.
