ಮೈಸೂರು, ಮಾ.5: ಜೆಡಿಎಸ್ ವತಿಯಿಂದ ಮಾ.6ರ ಬೆಳಿಗ್ಗೆ 10 ಗಂಟೆಗೆ ಮೈಸೂರು ಗಾಂಧಿ ವೃತ್ತ ದ ಸಮೀಪ ಸರ್ಕಾರದ ಗೃಹಲಕ್ಷ್ಮಿ ಯೋಜನೆ ಅನೀತಿ ತಾರತಮ್ಯ,ಸ್ಥಳೀಯ ಸಂಸ್ಥೆ ಚುನಾವಣೆ ವಿಳಂಬ ಖಂಡಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ರಾಜ್ಯ ಘಟಕದ ಸೂಚನೆ ಮೇರೆಗೆ ಜಿಲ್ಲಾ ಜೆಡಿಎಸ್ ಹಮ್ಮಿಕೊಂಡಿರುವ
ಈ ಪ್ರತಿಭಟನೆಗೆ ಮಾಜಿ ಸಚಿವರು ಹಾಲಿ ಮಾಜಿ ಶಾಸಕರು ಮತ್ತು ವಿಧಾನ ಪರಿಷತ್ ಸದಸ್ಯರು,ಮೈಸೂರ್ ಮಹಾನಗರ ಪಾಲಿಕೆಯ ಮಾಜಿ ಮಹಾಪೌರರು,ಮಾಜಿ ಸದಸ್ಯರು ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಹಾಲಿ ಮಾಜಿ ಅಧ್ಯಕ್ಷರು ಸದಸ್ಯರು ಮತ್ತು ಪಕ್ಷದ ಎಲ್ಲಾ ವಿಭಾಗದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಭಾಗವಹಿಸಲಿದ್ದಾರೆ.