ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಜೋ ಬೈಡನ್ ಅವರು ಪ್ರಾಸ್ಟೇಟ್ ಕ್ಯಾನ್ಸರ್ ನಿಂದ ಬಳಲುತ್ತಿದ್ದಾರೆ.
ಅವರಿಗೆ 82 ವರ್ಷ. ಬೈಡನ್ ಅವರ ಮೂಳೆಗಳಿಗೆ ಕ್ಯಾನ್ಸರ್ ಹರಡಿದೆ. ಜೋ ಬೈಡನ್ ಅವರ ಕಚೇರಿ ಈ ಮಾಹಿತಿಯನ್ನು ತಿಳಿಸಿದೆ.
ಜೋ ಬೈಡನ್ ಅವರ ಗಂಭೀರ ಆರೋಗ್ಯ ಸ್ಥಿತಿಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದುಃಖ ವ್ಯಕ್ತಪಡಿಸಿದ್ದು, ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದ್ದಾರೆ.
ಬೈಡನ್‌ಗೆ ಪ್ರಾಸ್ಟೇಟ್ ಕ್ಯಾನ್ಸರ್ ಇರುವ ಸುದ್ದಿ ಕೇಳಿ ತೀವ್ಯ ದುಃಖವಾಗಿದೆ. ಬೈಡನ್ ಬೇಗ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ
ಜೋ ಬೈಡನ್‌ಗೆ ಅವರಿಗೆ ಮೂತ್ರ ವಿಸರ್ಜನೆಯಲ್ಲಿ ಸಮಸ್ಯೆ ಎದುರಾಗಿತ್ತು, ಹಾಗಾಗಿ ಶುಕ್ರವಾರ ವೈದ್ಯರನ್ನು ಭೇಟಿಯಾಗಿದ್ದರು. ವೈದ್ಯರು ವೈದ್ಯಕೀಯ ತಪಾಸಣೆ ಮಾಡಿದ ಬಳಿಕ ರಿಪೋರ್ಟ್ ನೋಡಿ ಎಲ್ಲರೂ ಆಘಾತಕ್ಕೊಳಗಾಗಿದ್ದರು.
ರಾಜಕೀಯದಲ್ಲಿ ದೀರ್ಘ ಅನುಭವ ಜೋ ಬೈಡೆನ್ 2021 ರಿಂದ 2025 ರವರೆಗೆ ಅಮೆರಿಕದ ಅಧ್ಯಕ್ಷರಾಗಿದ್ದರು. 2024 ರಲ್ಲಿ, ಅವರು ತಮ್ಮ ಆರೋಗ್ಯ ಸ್ಥಿತಿಯನ್ನು ಪರಿಗಣಿಸಿ ಮತ್ತೆ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದರು.