ಮೈಸೂರು: ಒಂದು ರಾಷ್ಟ್ರ ಒಂದು ಚುನಾವಣೆಯಿಂದ ನಮ್ಮ ದೇಶವು ಆರ್ಥಿಕ ಪ್ರಗತಿಯತ್ತ ಸಾಗಲಿದೆ ಎಂದು ಮೈಸೂರು ನಗರ ಬಿಜೆಪಿ ಉಪಾಧ್ಯಕ್ಷ ಜೋಗಿ ಮಂಜು ಅಭಿಪ್ರಾಯ ಪಟ್ಟಿದ್ದಾರೆ.
ಒಂದು ರಾಷ್ಟ್ರ ಒಂದು ಚುನಾವಣೆಯಿಂದ ಭಾರತದಲ್ಲಿ ಲೋಕಸಭೆ ಹಾಗೂ ವಿಧಾನ ಸಭೆ ಚುನಾವಣೆಯು ಏಕಕಾಲದಲ್ಲಿ ನಡೆಯುವುದರಿಂದ ಪ್ರಜಾಪ್ರಭುತ್ವ ಗಟ್ಟಿಗೊಳ್ಳಲಿದೆ ಹಾಗೂ ಚುನಾವಣಾ ವೆಚ್ಚದಲ್ಲಿ ಬಾರಿ ಇಳಿಕೆಯಾಗಲಿದೆ ಜತೆಗೆ ಸಮಯ ಉಳಿತಾಯವಾಗಲಿದೆ ಆಂತರಿಕವಾಗಿ ಪ್ರಜಾಪ್ರಭುತ್ವಕ್ಕೆ ಜಯ ಸಿಗಲಿದೆ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಸ್ವಾತಂತ್ರ್ಯ ದಿನಾಚರಣೆಯ ಸಂಧರ್ಭದಲ್ಲಿ ಕೆಂಪು ಕೋಟೆಯಲ್ಲಿ ಈ ವಿಚಾರ ಪ್ರಸ್ತಾಪಿಸುವ ಮೂಲಕ ರಾಷ್ಟ್ರಕ್ಕೆ ಸಂದೇಶವನ್ನು ನೀಡಿದ್ದರು,ಅದು ಈಗ ನಿಜವಾಗಿದೆ.
ಗ್ರಾಮ ಪಂಚಾಯತಿಯಿಂದ ಲೋಕಸಭಾ ಚುನಾವಣಾ ಯವರೆಗೂ ಒಟ್ಟೊಟ್ಟಿಗೆ ನಡೆಯುವುದು ಇದು ಐತಿಹಾಸಿಕ ನಿಲುವುವಾಗಿದೆ, ಇದು ಪ್ರಜಾಪ್ರಭುತ್ವ ದ ಗೆಲುವಾಗಿದೆ ಎಂದು ಜೋಗಿ ಮಂಜು ಹೇಳಿದ್ದಾರೆ.
ವಿರೋಧ ಪಕ್ಷಗಳು ಒಂದು ದೇಶ ಒಂದು ಚುನಾವಣೆಯನ್ನು ವಿರೋಧ ಮಾಡುವುದನ್ನು ಬಿಟ್ಟು ಇದಕ್ಕೆ ಪೂರಕವಾಗಿ ಸಹಕಾರ ಕೊಡಬೇಕೆಂದು ಅವರು ಆಗ್ರಹಿಸಿದ್ದಾರೆ.