ಮೈಸೂರು: ನಗರದ ಸರಸ್ವತಿಪುರಂ
ಜೆಎಸ್ಎಸ್ ಪ್ರಾಯೋಗಿಕ ಪ್ರಾಥಮಿಕ ಶಾಲೆಯಲ್ಲಿ ಈ ಸಾಲಿನ ಶಾಲಾ ಪ್ರಾರಂಭೋತ್ಸವವನ್ನು ವಿಶೇಷವಾಗಿ ಮಾಡಲಾಯಿತು.
ವಿದ್ಯಾರ್ಥಿಗಳಿಗೆ ಹೋಗುಚ್ಚ ಮತ್ತು ಸಿಹಿ ನೀಡಿ ಸ್ವಾಗತಿಸುವ ಮೂಲಜ ಹಬ್ಬದ ವಾತಾವರಣ ನಿರ್ಮಾಣ ಮಾಡಲಾಗಿತ್ತು.
ಎಲ್ ಕೆ ಜಿ ವಿದ್ಯಾರ್ಥಿಗಳಿಗೆ ಅಕ್ಷರ ಅಭ್ಯಾಸ ಮಾಡಿಸಲಾಯಿತು ಮತ್ತು ಪ್ರೈಮರಿ ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ವಿತರಣೆ ಮಾಡಲಾಯಿತು.
ಜೊತೆಗೆ ಪೂರಕ ಪೌಷ್ಟಿಕ ಆಹಾರ ಕ್ಷೀರ ಭಾಗ್ಯ ಯೋಜನೆ ಅಡಿ ಹಾಲು ವಿತರಿಸಲಾಯಿತು.
ಶಾಲೆಯ ಮುಖ್ಯೋಪಾಧ್ಯಾಯರಾದ ಗುರುಸ್ವಾಮಿ ಎಂ ಅವರು ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಶಾಲೆಯ ಎಲ್ಲಾ ಬೋಧಕ, ಬೋಧಕೇತರರು ಮತ್ತು ಪೋಷಕರು ಹಾಜರಿದ್ದರು.