ಸಾಹಿತ್ಯಾಭಿರುಚಿ ಬೆಳೆಸಿಕೊಂಡರೆ ಕನ್ನಡ ಭಾಷೆ ಉಳಿಸಲು ಸಾಧ್ಯ:‌ ಚನ್ನಬಸಪ್ಪ

Spread the love

ಮೈಸೂರು: ಸಾಹಿತ್ಯಾಭಿರುಚಿ ಬೆಳೆಸಿಕೊಂಡರೆ ಮಾತ್ರ ಕನ್ನಡ ಭಾಷೆ ಉಳಿಸಲು ಸಾಧ್ಯ ಎಂದು ಜ್ಯೋತಿ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಎ.ಎಸ್. ಚನ್ನಬಸಪ್ಪ ಹೇಳಿದರು.

ಪ್ರಣಮ್ಯ ಎಜುಕೇಶನಲ್ ಟ್ರಸ್ಟ್ ವತಿಯಿಂದ ಮೈಸೂರಿನ ಕುವೆಂಪು ನಗರದಲ್ಲಿರುವ ಜ್ಯೋತಿ ಶಿಕ್ಷಣ ಸಂಸ್ಥೆಯಲ್ಲಿ ಹಮ್ಮಿಕೊಂಡಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬರೂ ಸಾಹಿತ್ಯಾಭಿರುಚಿ ಬೆಳೆಸಿಕೊಳ್ಳಬೇಕು, ಕನ್ನಡ ಭಾಷೆಯನ್ನು ಇತರರಿಗೂ ಕಲಿಸಬೇಕು ಆಗ ಮಾತ್ರ ನಮ್ಮ ಭಾಷೆ ಉಳಿಸಲು ಸಾಧ್ಯ ಎಂದು ತಿಳಿಸಿದರು.

ಪ್ರಣಮ್ಯ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷೆ ವಿ.ಪಿ.ಸವಿತಾ ಗೌಡ ಮಾತನಾಡಿ, ಕರ್ನಾಟಕದ ಗಡಿಭಾಗ ಗಳಲ್ಲಿ ಕನ್ನಡ ಭಾಷೆಯ ಉಳಿವಿಗೆ ಪ್ರತಿಯೊಬ್ಬ ಕನ್ನಡಿಗನು, ತನು ಮನ ಅರ್ಪಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜ್ಯೋತಿ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಎ.ಸಿ. ಅರವಿಂದ, ಮುಖ್ಯೋಪಾಧ್ಯಾಯರಾದ ಆನಿಲ್ ಕುಮಾರ್, ಪರಮೇಶ್ವರ್, ಜ್ಯೋತಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಭರತ್‌ ರಾಜ್ ಉಪಸ್ಥಿತರಿದ್ದರು.