ಸಿದ್ದರಾಮಯ್ಯ ರಾಜೀನಾಮೆ ಕೊಡಲಿ:ಕೋಳಿವಾಡ ಸಲಹೆ

Spread the love

ಬೆಂಗಳೂರು: ಮುಡಾ ಹಗರಣ ಸಂಬಂಧ ಹೈಕೋರ್ಟ್ ತೀರ್ಪು ಹೊರಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಪಕ್ಷದ ಒಳಗಡೆಯೂ ಒತ್ತಡ ಪ್ರಾರಂಭವಾಗಿದೆ.

ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಿರಿಯ ನಾಯಕ ಕೆ.ಬಿ.ಕೋಳಿವಾಡ ಹೇಳಿದ್ದಾರೆ.

ಬೇರೆ ಬೇರೆ ರಾಜ್ಯಗಳಲ್ಲಿ ಚುನಾವಣೆ ನಡೆಯುತ್ತಿದೆ. ಅಲ್ಲೂ ಸಿಎಂ ವಿಚಾರ ಪ್ರಸ್ತಾಪಿಸಿ ವಿಪಕ್ಷಗಳು ಮಾತನಾಡುತ್ತಿವೆ. ಆದ್ದರಿಂದ ಪಕ್ಷಕ್ಕೆ ಮುಜುಗರ ಆಗುತ್ತಿದೆ. ಆದ್ದರಿಂದ ಸಿದ್ದರಾಮಯ್ಯ ರಾಜೀನಾಮೆ ಕೊಡುವುದು ಒಳ್ಳೆಯದು ಎಂದು ಸಲಹೆ ನೀಡಿದ್ದಾರೆ.

ತನಿಖೆ ಎದುರಿಸಿ ಸಿಎಂ ನಿಷ್ಕಳಂಕಿತರು ಎಂಬುದು ಸಾಬೀತಾದ ಮೇಲೆ ಮತ್ತೆ ಅವರೇ ಮುಖ್ಯಮಂತ್ರಿ ಆಗಲಿ ಎಂದು ಕೋಳಿವಾಡ ಹೇಳಿದ್ದಾರೆ

ರಾಜೀನಾಮೆ ಕೊಡಲ್ಲ ಎನ್ನುತ್ತಿರುವುದು ಅವರ ಅಭಿಪ್ರಾಯ. ಅವರು ರಾಜೀನಾಮೆ ಕೊಡಬೇಕು ಎಂಬುದು ನಮ್ಮ ಅಭಿಪ್ರಾಯ ಎಂದು ತಿಳಿಸಿದ್ದಾರೆ.

ನನಗೂ ಸಿದ್ದರಾಮಯ್ಯಗೂ ಹಿಂದೆ ಭಿನ್ನಾಭಿಪ್ರಾಯ ಇತ್ತು,ಆದರೆ ಈಗ ನಾವು ಆತ್ಮೀಯವಾಗಿದ್ದೇವೆ. ಆದರೂ ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ಅವರು ರಾಜೀನಾಮೆ ಕೊಡುವುದು ಉತ್ತಮ ಬೆಳವಣಿಗೆ ಎಂಬುದು ನನ್ನ ಅಭಿಪ್ರಾಯ,ಇದು ನನ್ನ ವೈಯುಕ್ತಿಕ ಅಭಿಪ್ರಾಯ ಎಂದು ಸ್ಪಷ್ಟಪಡಿಸಿದರು.