ಹಾಸನ:ಹಾಸನ ಜಿಲ್ಲಾಧಿಕಾರಿ ಸಿ. ಸತ್ಯಭಾಮ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ.
ಹಾಸನ ನೂತನ ಜಿಲ್ಲಾಧಿಕಾರಿಯಾಗಿ ಕೆ.ಎಸ್. ಲತಾಕುಮಾರಿ ಅವರನ್ನು ನೇಮಕ ಮಾಡಲಾಗಿದೆ.
ಲತಾಕುಮಾರಿ ಅವರು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆಗಿದ್ದರು.
ಇದುವರೆಗೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ಸಿ. ಸತ್ಯಭಾಮ ಅವರಿಗೆ ಸಮಗ್ರ ಶಿಕ್ಷಣ ರಾಜ್ಯ ಯೋಜನಾ ನಿರ್ದೇಶಕರನ್ನಾಗಿ ನಿಯೋಜಿಸಲಾಗಿದೆ.
ಲತಾ ಕುಮಾರಿ ಅವರನ್ನು 2023 ರಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಯಾಗಿ ನೇಮಿಸಲಾಗಿತ್ತು. 2024 ರಲ್ಲಿ, ಅವರು ಮರಸೂರು ಗ್ರಾಮ ಪಂಚಾಯಿತಿಯನ್ನು ಸಂಪೂರ್ಣ ಬಿಮಾ ಗ್ರಾಮ ಪಂಚಾಯಿತಿ ಎಂದು ಘೋಷಿಸಿದ್ದರು.
ಇದಲ್ಲದೆ, ಅವರು ಸಂಕಲ್ಪ್ ಲರ್ನಿಂಗ್ ನೊಂದಿಗೆ ಕೆಲಸ ಮಾಡಿದ್ದಾರೆ ಹಾಗೂ ವಿದ್ಯಾರ್ಥಿಗಳಿಗೆ ಎಸ್ ಎಸ್ ಎಲ್ ಸಿ ಮತ್ತು ಎನ್ ಎಂ ಎಂ ಎಸ್ ನಲ್ಲಿ ಸಹಾಯ ಮಾಡಿದ್ದಾರೆ.