ಕೊಳ್ಳೇಗಾಲ: ಪಟ್ಟಣದ ಪ್ರವಾಸಿ ಮಂದಿರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ತಾಲ್ಲೂಕು ಸಮಿತಿಗೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಗೌರವಧ್ಯಕ್ಷರಾಗಿ ಬಿಸಲಯ್ಯ ಕುಮಾರ್, ಪ್ರಧಾನ ಕಾರ್ಯದರ್ಶಿ ಮಹೇಶ್, ಸಹ ಕಾರ್ಯದರ್ಶಿ ಶೇಖರ್, ಉಪಾಧ್ಯಕ್ಷರಾಗಿ ರವಿ, ಯೂನಸ್ ಪಾಷ, ಸ್ವೀಟ್‌ಗಿರಿ ಅವರನ್ನು ತಾಲ್ಲೂಕು ಸಮಿತಿಗೆ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಯಿತು.
ಈ ವೇಳೆ ಕರವೇ ಅಧ್ಯಕ್ಷ ಜಗದೀಶ್ ಶಾಸ್ತ್ರೀ ಮಾತನಾಡಿ, ಇಂದು ನಮ್ಮ ತಾಲ್ಲೂಕು ಸಮಿತಿಗೆ ನೂತನವಾಗಿ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಯಿತು. ನಮ್ಮ ರಾಜ್ಯಾಧ್ಯಕ್ಷರಾದ ಪ್ರವೀಣ್ ಕುಮಾರ್ ಶೆಟ್ಟಿ ಅವರು ಮೇಕೆದಾಟು ಯೋಜನೆ ಶೀಘ್ರದಲ್ಲಿ ಪ್ರಾರಂಭವಾಗಲಿ ಎಂದು ಕರೆ ನೀಡಿರುವ ಹೋರಾಟದ ಹಿನ್ನೆಲೆಯಲ್ಲಿ ರಾಮನಗರದಿಂದ ಬೆಂಗಳೂರು ವಿಧಾನಸೌಧದವರೆಗೆ ಇದೇ ಮಾ.೨೧ ರಂದು ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆಗೆ ತಾಲ್ಲೂಕು ಹಾಗೂ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಪದಾಧಿಕಾರಿಗಳು ಭಾಗವಹಿಸಿ ಪಾದಯಾತ್ರೆಯನ್ನು ಯಶಸ್ವಿಗೊಳಿಸಬೇಕೆಂದು ಕರೆ ನೀಡಿದರು.

ಈ ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಮ್ಮ, ಮಂಗಳಮ್ಮ, ಮುಳ್ಳೂರು ಮಹದೆವಮ್ಮ, ಶಿವಮ್ಮ, ಅಣಗಳ್ಳಿ ಬಸವರಾಜು, ಉಗನಿಯ ಕುಮಾರ್, ಹೊಸ ಹಂಪಾಪುರ ರೇವಣ್ಣ, ಕಾರ್ಯಾಧ್ಯಕ್ಷ ಮಹಮ್ಮದ್ ಅಬ್ಜಲ್(ಅಜ್ಜು), ಸಿಂಗನಲ್ಲೂರು ಸುರೇಶ್, ರಾಜಿಖ್(ಗುಡ್ಡು), ಪತ್ರಿಕಾ ಸಲಹೆಗಾರ ದೊಡ್ಡಿಂದುವಾಡಿ ಸಿದ್ದರಾಜು ಇತರರು ಭಾಗವಹಿಸಿದ್ದರು.
