ಮೈಸೂರು: ಪದವಿ ಪೂರ್ವ ಶಿಕ್ಷಣ ಇಲಾಖೆಯ ಮೈಸೂರು ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಮೈಸೂರಿನ ಪೀಪಲ್ಸ್ ಪಾರ್ಕ್ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಕಬಡ್ಡಿ ತಂಡ ಗೆದ್ದು ಕಾಲೇಜಿಗೆ ಕೀರ್ತಿ ತಂದಿದೆ.
ಈ ತಂಡ ಕಬ್ಬಡ್ಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ವಿಜೇತರಾಗಿದ್ದಾರೆ.
ಗೆದ್ದು ಕೀರ್ತಿ ತಂದ ತಂಡಕ್ಕೆ ಕಾಲೇಜಿನ ಪ್ರಾಂಶುಪಾಲರಾದ ಜಾನ್ ಪಿ.ಎಸ್, ಉಪನ್ಯಾಸಕರಾದ ನಾಗರಾಜು,
ಪ್ರಮೀಳಾ ,ಮಾಲಿನಿ ಮತ್ತು ವಿ.ಎನ್ ಮುಕುಂದ ಮತ್ತು ಸಿಬ್ಬಂದಿ ಅಭಿನಂದಿಸಿದರು.
