ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಮೈಸೂರಿನ ರಾಮಾನುಜ ರಸ್ತೆಯಲ್ಲಿನ ಪುರಾತನ ಶ್ರೀ ಕಾಮಕಾಮೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು
ಈ ಸಂದರ್ಭದಲ್ಲಿ ಸಾಹಿತಿ ಹಾಗೂ ಸಂಗೀತ ನಿರ್ದೇಶಕ ಕೆ ಕಲ್ಯಾಣ್ ಅವರು ಸಹ ಭಾಗಿಯಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದರು
ನಗರಪಾಲಿಕೆ ಮಾಜಿ ಸದಸ್ಯ ಎಂ.ಡಿ ಪಾರ್ಥಸಾರಥಿ, ಜೋಗಿ ಮಂಜು, ಜೀವದಾರ ಗಿರೀಶ್, ಶಿವಕುಮಾರ್, ಮಹೇಶ್, ಗುರುರಾಜ್, ಗುರು ಹಾಗೂ ಬಿಜೆಪಿ ಮುಖಂಡರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
