ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವ:ಸಿದ್ದರಾಮಯ್ಯ

Spread the love

ಬೆಂಗಳೂರು: ಕಾಗಿನೆಲೆಯಲ್ಲಿ ಪ್ರತಿ ವರ್ಷ ಕನಕ ಉತ್ಸವವನ್ನು ಆಚರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿಎಂ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು.

ಈ ವೇಳೆ ಸಿದ್ದರಾಮಯ್ಯ ಮಾತನಾಡಿ, ಉತ್ಸವ ಸಂದರ್ಭದಲ್ಲಿ ಜಿಲ್ಲೆಯ ದಾರ್ಶನಿಕರ ಜೀವನಾದರ್ಶಗಳನ್ನು ಪ್ರತಿಬಿಂಬಿಸುವ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದು ಸೂಚಿಸಿದರು.

ಪ್ರಾಧಿಕಾರದಲ್ಲಿ ಸಂಚಿತ ನಿಧಿಯನ್ನು ಸ್ಥಾಪಿಸಿ ಕಾರ್ಯಕ್ರಮಗಳನ್ನು ನಿರಂತರವಾಗಿ ಕೈಗೊಳ್ಳಲು ಕ್ರಮ ಕೈಗೊಳ್ಳಬೇಕು. ಪ್ರಾಧಿಕಾರದ ಆದಾಯ ಹೆಚ್ಚಳಕ್ಕೆ ಯೋಜನೆಗಳನ್ನು ರೂಪಿಸಬೇಕು ಎಂದು ಸಿಎಂ ಆದೇಶ ನೀಡಿದರು.

ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಕನಕದಾಸರ ಕರ್ಮಭೂಮಿ ಕಾಗಿನೆಲೆ ಮತ್ತು ಜನ್ಮಭೂಮಿ ಸ್ಥಳವಾದ ಬಾಡ ಗ್ರಾಮ ಹಾಗೂ ಸುತ್ತಮುತ್ತಲಿನ ಪರಂಪರೆಯ ತಾಣಗಳನ್ನು ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸುವ ಬಗ್ಗೆ ವಿವಿಧ ಯೋಜನೆಗಳ ಕ್ರಿಯಾ ಯೋಜನೆ ಅನುಮೋದನೆಗೆ ಸಲ್ಲಿಸಲಾಯಿತು.

ಪ್ರಾಧಿಕಾರದ ವ್ಯಾಪ್ತಿಯಲ್ಲಿ ಕಲಾಭವನ ನಿರ್ಮಾಣ,
ಕನಕ ವಸ್ತು ಸಂಗ್ರಹಾಲಯದಲ್ಲಿ ಒಳವಸ್ತು ಶಿಲ್ಪ ಸಂಗ್ರಹಾಲಯ ನಿರ್ಮಾಣ, ಚೆನ್ನಕೇಶವ ದೇವಾಲಯ, ಮೆಟ್ಟಿಲು, ಗೋಪುರ, ಕಮಾನುಗಳ ನಿರ್ಮಾಣ, ಕದರಮಂಡಲಗಿ ವೆಂಕಟೇಶ್ವರ ದೇವಸ್ಥಾನ, ಸಮುದಾಯ ಭವನ ನಿರ್ಮಾಣ ಮಾಡಲು ಸಿಎಂ ಸಮ್ಮುಖದಲ್ಲಿ ತೀರ್ಮಾನಿಸಲಾಯಿತು.

ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ
ಸಲೀಂ ಅಹ್ಮದ್, ಸಚಿವ ಶಿವಾನಂದ ಪಾಟೀಲ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್ ಎಂ ರೇವಣ್ಣ ಮತ್ತು ಪ್ರಾಧಿಕಾರದ
ಅಧಿಕಾರಿಗಳು ಉಪಸ್ಥಿತರಿದ್ದರು.