ಮೈಸೂರು: ನಾಮಫಲಕಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯನ್ನೇ ಬರೆಯಬೇಕೆಂದು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ಆಗ್ರಹಿಸಿದೆ.
ಮಂಗಳವಾರ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ಕರ್ನಾಟಕ ಕನ್ನಡ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಚಾ ಗು ನಾಗರಾಜ್ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.
ನಾಮಫಲಕಗಳಲ್ಲಿ ಪ್ರಾಥಮಿಕವಾಗಿ ಕನ್ನಡ ಭಾಷೆಯನ್ನು ಬರೆಯಬೇಕು, ಸರ್ಕಾರದ ಸುತ್ತೋಲೆಯನ್ನು ಪಾಲಿಸಬೇಕೆಂದು ಮನವಿ ಮಾಡಲಾಯಿತು.
ಈ ವೇಳೆ ಮಾತನಾಡಿದ ಚಾ ಗು ನಾಗರಾಜ್,
ಮೈಸೂರು ಜಿಲ್ಲೆಯಲ್ಲಿ ವಿವಿಧೆಡೆ ಲೈಸೆನ್ಸ್ ಗಳನ್ನು ಪಡೆದುಕೊಂಡು ಖಾಸಗಿಯವರು ನಾಮಫಲಕದಲ್ಲಿ ಕನ್ನಡವನ್ನು ಕಡೆಗಣಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮೂರು ದಿನಗಳ ಒಳಗಾಗಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಮನವಿ ಮಾಡಿದ್ದೇವೆ, ಕನ್ನಡ ನಾಮಫಲಕ ಹಾಕಿಸಲು ಕ್ರಮ ಕೈಗೊಳ್ಳದಿದ್ದರೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತುಗೆ ಹಾಕುವುದಾಗಿ ಚಾ ಗು ನಾಗರಾಜ್ ಎಚ್ಚರಿಸಿದರು.
ಜಿಲ್ಲಾಧಿಕಾರಿಗಳ ಭೇಟಿ ವೇಳೆ ಮೈಸೂರು ಜಿಲ್ಲಾಧ್ಯಕ್ಷ ಸಂತೋಷ್, ಪ್ರಧಾನ ಕಾರ್ಯದರ್ಶಿ ಗೌತಮ್ ವಿಶ್ವಕರ್ಮ, ಅನುರಾಜ್ ಗೌಡ, ಸಿಂಧುವಳ್ಳಿ ಶಿವಕುಮಾರ್, ಸುರೇಶ್, ಮಾಲಿಂಗ, ದೇವರಾಜ್ ಹಾಜರಿದ್ದರು.
