ಮೈಸೂರು: ಮೈಸೂರಿನ ಹೂಟಗಳ್ಳಿ ಹೌಸಿಂಗ್ ಬೋರ್ಡ್ ಬಡಾವಣೆಯಲ್ಲಿರುವ ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಭಾನುವಾರ ಕನ್ನಡ ರಾಜ್ಯೋತ್ಸವ ಆಚರಿಸಲಾಯಿತು.
ಭಾನುವಾರ ಬೆಳಿಗ್ಗೆ 8.30 ಗಂಟೆಗೆ ಸೃಜ್ಞಾನ ಪೌಂಡೇಶನ್ ಟ್ರಸ್ಟ್ ಕಚೇರಿಯಲ್ಲಿ ಸಂಘದ ಅಧ್ಯಕ್ಷ ಕೆ ನಾಗೇಶ್ ಅವರ ಅಧ್ಯಕ್ಷತೆಯಲ್ಲಿ 69ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕಜಿ.ಟಿ. ದೇವೇಗೌಡ ಅವರು ಕನ್ನಡ ಧ್ವಜಾರೋಹಣ ಮಾಡಿದರು.
ಕನ್ನಡ ಭಾಷೆಯನ್ನು ಹೆಚ್ಚಾಗಿ ಬಳಸಿ ಬೆಳೆಸಬೇಕು,ಕನ್ನಡ ಬಾರದವರಿಗೂ ಕನ್ನಡ ಕಲಿಸಬೇಕು ಎಂದು ಈ ವೇಳೆ ಜಿ.ಟಿ.ದೇವೇಗೌಡ ಸಲಹೆ ನೀಡಿದರು.
ಒಕ್ಕಲಿಗರ ಕ್ಷೇಮಾಭಿವೃದ್ಧಿ ಸಂಘದ ಎಲ್ಲಾ ಪದಾಧಿಕಾರಿಗಳು ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.