ಕೆನಡಾ: ಕೆನಡಾದಲ್ಲಿ ಕನ್ನಡಿಗ ಯುವಕನನ್ನು ಗುಂಡು ಹಾರಿಸಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಚಂದನ್ ಎಂಬಾತನನ್ನು ವುಡ್ಬೈನ್ ಮಾಲ್ ಬಳಿ ಹಲವು ಬಾರಿ ಗುಂಡು ಹಾರಿಸಿ ಕೊಲ್ಲಲಾಗಿದೆ.
ಈ ಹತ್ಯೆಯ ವಿಷಯ ತಿಳಿದು ಕುಟುಂಬದವರ ದುಃಖ ಮೇರೆ ಮೀರಿದೆ. ಹತ್ಯೆಗೆ ಕಾರಣ ಗೊತ್ತಾಗಿಲ್ಲ.
ಕೆನಡಾದಲ್ಲಿ ಕೆಲಸ ಮಾಡುತ್ತಿದ್ದ ನೆಲಮಂಗಲದ ಚಂದನ್ ಕುಮಾರ್ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಚಿಕಿತ್ಸೆಗೂ ಮೊದಲೇ ಆತ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿ ಚಂದನ್ ಕುಮಾರ್ (37) ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಗ್ರಾಮದ ಮೂಲದವರಾಗಿದ್ದು, ಕಳೆದ ಆರು ವರ್ಷಗಳಿಂದ ಕೆನಡಾದಲ್ಲಿ ನೆಲೆಸಿ, ಎಲ್ ಅಂಡ್ ಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು
