ಮೈಸೂರು: ಮೈಸೂರಿನ ಜ್ಯೋತಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಡೀನ್ ಅರ್ಜುನ್ ಕರಾಟೆ ಚಾಂಪಿಯನ್ ಆಗಿದ್ದು ನಾಡಿಗೆ ಕೀರ್ತಿ ತಂದಿದ್ದಾರೆ.
ಅರ್ಜುನ್ ಅವರು 2024- 25 ನೇ ಸಾಲಿನ ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಪ್ರಶಸ್ತಿ ಗಳಿಸಿ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅವರಿಗೆ ಶಾಲೆಯ ಸಿಬ್ಬಂದಿ,ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿ ಶುಭ ಕೋರಿದ್ದಾರೆ.