ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಿಶ್ತವಾರ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಎನ್ಕೌಂಟರ್ ಮಾಡಿ ಇಬ್ಬರು ಭಯೋತ್ಪಾದಕರನ್ನು ಬಲಿ ಪಡೆದಿದ್ದಾರೆ.
ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಸಂಘಟನೆಗೆ ಸೇರಿದ ಉಗ್ರರನ್ನು ಭದ್ರತಾ ಪಡೆಗಳು ಗುಂಡಿಕ್ಕಿ ಹತ್ಯೆಗೈದಿದ್ದು, ಎರಡು ಎಕೆ-27 ರೈಫಲ್, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಮೊದಲು ಜಮ್ಮುವಿನಲ್ಲಿ ನಡೆದ ಪ್ರತ್ಯೇಕ ಎನ್ಕೌಂಟರ್ಗಳಲ್ಲಿ ಆರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿತ್ತು.
ಜತೆಗೆ ಉಧಂಪುರದಲ್ಲೂ ಇಬ್ಬರು, ಕಥುವಾದಲ್ಲಿ ಒಬ್ಬ ಉಗ್ರನನ್ನು ಹತ್ಯೆ ಮಾಡಲಾಗಿತ್ತು.
