2022-23ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರದಾನ

Spread the love

ಮೈಸೂರು: 2022-23ನೇ ಸಾಲಿನ ಕಾಯಕಲ್ಪ ಪ್ರಶಸ್ತಿ ಪ್ರದಾನ ಮಾಡಿ ಅರ್ಹರಿಗೆ ಗೌರವ ಸಲ್ಲಿಸಲಾಯಿತು.

ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ.ಎಂ.ಗಾಯತ್ರಿ ಅವರ ಸಮ್ಮುಖದಲ್ ಆಯೋಜಿಸಲಾಗಿದ್ದ ಸಮಾರಂಭದಲ್ಲಿ 2022-23ನೇ ಸಾಲಿನಲ್ಲಿ ಜಿಲ್ಲೆಯಾದ್ಯಂತ ಸುಮಾರು 67 ಆರೋಗ್ಯ ಕೇಂದ್ರಗಳು ಕಾಯಕಲ್ಪ ಪ್ರಶಸ್ತಿಗೆ ಭಾಜನರಾಗಿದ್ದು, ಆರೋಗ್ಯ ಕೇಂದ್ರಗಳಿಗೆ ಪ್ರಶಂಸಾ ಪಾತ್ರವನ್ನು ವಿತರಣೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಜಿಲ್ಲಾ ಮಟ್ಟದ ವೈದ್ಯಾಧಿಕಾರಿಗಳ 2ನೇ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನೂ ನಡೆಸಲಾಯಿತು.

ಸಭೆಯಲ್ಲಿ ಜಿಲ್ಲಾಧಿಕಾರಿಗಳು ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳನ್ನು ಮಾರ್ಗಸೂಚಿ ಅನುಸಾರ ಪರಿಣಾಮಕಾರಿ ಅನುಷ್ಠಾನ ಮಾಡಿ, ಶೇಕಡಾ 100 ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸಲು ಕಟ್ಟುನಿಟ್ಟಾಗಿ ಸೂಚನೆ ನೀಡಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕುಮಾರಸ್ವಾಮಿ ಪಿ.ಸಿ. ಸೇರಿದಂತೆ ಎಲ್ಲಾ ಕಾರ್ಯಕ್ರಮ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.