ಕೇರಳ ಲಾಟರಿ ಟಿಕೇಟ್‌ ಅಕ್ರಮ ಮಾರಾಟ; ವ್ಯಕ್ತಿ ಬಂಧನ

Spread the love

ಚಾಮರಾಜನಗರ: ಅಕ್ರಮವಾಗಿ ಕೇರಳ ರಾಜ್ಯದ ಲಾಟರಿ ಟಿಕೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.

ಕಮ್ಮು ಅಲಿಯಾಸ್ ಕಮರ್ ಪಾಷಾ ಬಂಧಿತ ಆರೋಪಿ.

ಜಿಲ್ಲೆಯಲ್ಲಿ ಅಕ್ರಮ ಚಟುವಟಿಕೆಗಳನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿಗಳ ನಿರ್ದೇಶನದ ಮೇರೆಗೆ ಪೊಲೀಸರು ಅಲರ್ಟ್ ಆಗಿದ್ದಾರೆ.

ಅಗರ-ಮಾಂಬಳ್ಳಿ ಪೊಲೀಸ್ ಠಾಣೆಯ ಅರಕ್ಷಕ ಉಪನಿರೀಕ್ಷಕ ಕರಿಬಸಪ್ಪ ಎನ್ ಅವರು ಖಚಿತ ಮಾಹಿತಿ ಆಧರಿಸಿ ನಿನ್ನೆ ಸಂಜೆ ಸಿಬ್ಬಂದಿಗಳೊಡನೆ ಮಾಂಬಳ್ಳಿ ಗ್ರಾಮದ ರವಿ ಹೋಟೆಲ್ ಪಕ್ಕದ ರಸ್ತೆಯಲ್ಲಿ ಅಕ್ರಮವಾಗಿ ಲಾಟರಿ ಟಿಕೇಟ್‌ ಮಾರಾಟ ಮಾಡುತ್ತಿದ್ದ ಕಮ್ಮು ಅಲಿಯಾಸ್ ಕಮರ್ ಪಾಷಾ ಎಂಬಾತನನ್ನು ಬಂಧಿಸಿ ಆತನ ಬಳಿ ಇದ್ದ 84 ಕೇರಳ ರಾಜ್ಯದ ಲಾಟರಿ ಟಿಕೆಟ್‌ಗಳನ್ನು ವಶಪಡಿಸಿಕೊಂಡಿದ್ದಾರೆ.

ಜತೆಗೆ 150 ಹಣವನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಈ ಪತ್ತೆ ಕಾರ್ಯಕ್ಕೆ ಮಾನ್ಯ ಪೊಲೀಸ್ ಅಧೀಕ್ಷಕರಾದ ಡಾ. ಕವಿತಾ ಬಿ.ಟಿ ಅವರು ಪ್ರಶಂಸನೆ ವ್ಯಕ್ತಪಡಿಸಿದ್ದು, ಮುಂದಿನ ದಿನಗಳಲ್ಲೂ ಇನ್ನೂ ಹೆಚ್ಚಿನ ಅಕ್ರಮ ಚಟುವಟಿಕೆಗಳನ್ನು ಪತ್ತೆ ಹಚ್ಚಿ ನಿಗ್ರಹಿಸುವಂತೆ ಸೂಚನೆ ನೀಡಿದ್ದಾರೆ.