ಕೇರಳ: ಕೇರಳದ ವಯನಾಡು ಜಿಲ್ಲೆಯಲ್ಲಿ ಭಾರೀ ಮಳೆಗೆ ಭೀಕರ ಭೂಕುಸಿತ ಸಂಭವಿಸಿದ್ದು 7 ಮಂದಿ ಮೃತಪಟ್ಟಿದ್ದು ಹಲವು ಮಂದಿ ಕಣ್ಮರೆಯಾಗಿದ್ದಾರೆ.
ಕೇರಳದ ಮಲಪ್ಪುರಂ ಮತ್ತು ವಯನಾಡ್ ಜಿಲ್ಲೆಗಳನ್ನು ಸಂಪರ್ಕಿಸುವ ಸುರಂಗ ರಸ್ತೆ ಯೋಜನೆಯ ಕೆಲಸ ನಡೆಯುತ್ತಿರುವ ಕಲ್ಲಡಿಯ ಮೀನಾಕ್ಷಿ ಸೇತುವೆಯ ಬಳಿ ಭೂಕುಸಿತ ಸಂಭವಿಸಿದೆ.
ಸುರಂಗ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು ತಂಗಿದ್ದ ಸ್ಥಳದಿಂದ ಸ್ಥಳೀಯ ನಿವಾಸಿಗಳು ಮೂವರನ್ನು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸುರಂಗ ಮಾರ್ಗವಾಗಿ ಸಾಗುತ್ತಿದ್ದ ಕೆಲವು ವಾಹನಗಳು ಸಹ ಭೂಕುಸಿತದಲ್ಲಿ ಹಾನಿಗೊಳಗಾಗಿವೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ಮುಖ್ಯಮಂತ್ರಿ ತುರ್ತು ಸಭೆ
ಭೂಕುಸಿತದ ಹಿನ್ನೆಲೆಯಲ್ಲಿ ಕೇರಳದ ಮುಖ್ಯಮಂತ್ರಿ ವಿ.ಡಿ. ಸತೀಶನ್ ಹಾಗೂ ವಯನಾಡ್ ಉಸ್ತುವಾರಿ ಸಚಿವ ಟಿ. ಸಿದ್ದಿಕ್ ಅವರೊಂದಿಗೆ ತುರ್ತು ಸಭೆ ನಡೆಸಿ ರಕ್ಷಣಾ ಕಾರ್ಯಾಚರಣೆಗಳನ್ನು ನಡೆಸಲು ನಿರ್ದೇಶಿಸಿದ್ದಾರೆ.
ಇನ್ನು ಈಗ ಸಂಭವಿಸಿರುವುದು ಮಾನವ ನಿರ್ಮಿತ ಭೂಕುಸಿತ ಎಂದು ಕೇರಳ ಸರ್ಕಾರವು ಹೇಳಿದೆ. ಸುರಂಗ ಯೋಜನೆಯ ಭಾಗವಾಗಿ ತೆಗೆಯಲಾಗಿದ್ದ ಮಣ್ಣನ್ನು ಅವೈಜ್ಞಾನಿಕವಾಗಿ ವಿಲೇವಾರಿ ಮಾಡಿದ್ದರಿಂದ ಈ ಭೂಕುಸಿತ ಸಂಭವಿಸಿದೆ ಎಂದು ಹೇಳಲಾಗಿದೆ.
