ಬೆಂಗಳೂರು: ಖ್ಯಾತ ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಇಂದು ಮುಂಜಾನೆ ನಿಧನ ಹೊಂದಿದ್ದಾರೆ.
ಸರೋಜ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು,ಹಾಗಾಗಿ
ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಅವರು ಭಾನುವಾರ ಬೆಳಿಗ್ಗೆ 7 ಗಂಟೆಗೆ ನಿಧನ ಹೊಂದಿದ್ದಾರೆ.
ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಅವರು ಮಂಗಳೂರು ಮೂಲದವರು.
ಆಗಾಗ್ಗೆ ಕೆಲವು ಸಿನಿಮಾ ಸಂಬಂಧಿ ಕಾರ್ಯಕ್ರಮಗಳಲ್ಲಿ ಸುದೀಪ್ರ ತಾಯಿ ಭಾಗವಹಿಸುತ್ತಿದ್ದರು.
ಬೆಳಿಗ್ಗೆ 11 ಗಂಟೆಯಿಂದ ಸುದೀಪ್ರ ತಾಯಿಯಯವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿ ಸಂಜೆ ಅಂತ್ಯಕ್ರಿಯೆ ನೆರವೇರಿಸಲಾಯಿತು.
ಸುದೀಪ್ ತಾಯಿ ಸರೋಜ ಅವರ ನಿಧನಕ್ಕೆ ಸ್ಯಾಂಡಲ್ ವುಡ್ ಸೇರಿದಂತೆ ರಾಜಕಾರಣಿಗಳು,ಕಿಚ್ಚ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.