ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾ ಯಶಸ್ವಿಗೊಂಡ ಹಿನ್ನೆಲೆಯಲ್ಲಿ ಪೂರ್ವಜರ ಕೆಲಸವನ್ನು ಮುಂದುವರೆಸಿಕೊಂಡು ಬಂದಿರುವ ವಿದ್ವಾನ್ ಪ್ರಹ್ಲಾದ್ ರಾವ್ ಅವರನ್ನು ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ಸನ್ಮಾನಿಸಲಾಯಿತು.
ದಸರಾ ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳ ಹಾಗೂ ಅಂಬಾರಿಯಲ್ಲಿ ಪ್ರತಿಷ್ಠಾಪಿಸುವ ಚಾಮುಂಡೇಶ್ವರಿಯ ಪೂಜೆಯನ್ನು ಸತತ 28ವರ್ಷಗಳಿಂದ ನೆರವೇರಿಸಿಕೊಂಡು ಬರುತ್ತಿದ್ದು
ನಮ್ಮ ಸಂಸ್ಕಾರ ಸಂಸ್ಕೃತಿ ಹಾಗೂ ಪೂರ್ವಜರ ಕೆಲಸವನ್ನು ಮುಂದುವರೆಸಿಕೊಂಡು ಬಂದಿರುವ ವಿದ್ವಾನ್ ಪ್ರಹ್ಲಾದ್ ರಾವ್ ಅವರನ್ನು ಅರಮನೆ ಆವರಣದಲ್ಲಿ ಆನೆಗಳನ್ನು ಮರಳಿ ಕಾಡಿಗೆ ಕಲಿಸುವ ಪೂಜಾ ಕಾರ್ಯದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯ ನಜರ್ಬಾದ್ ನಟರಾಜ್, ಜಿ ರಾಘವೇಂದ್ರ, ಕೆ ಎಂ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಎಸ್. ಎನ್ ರಾಜೇಶ್, ರವಿಚಂದ್ರನ್, ಮೋಹನ್, ನಿತಿನ್, ದಿನೇಶ್, ಅಮಿತ್ ಮತ್ತಿತರರು ಹಾಜರಿದ್ದರು.