ಮೈಸೂರು: ಸ್ವಾಮಿ ವಿವೇಕಾನಂದ ಜಯಂತಿ ಅಂಗವಾಗಿ ಕೆ ಎಂ ಪಿ ಕೆ ಟ್ರಸ್ಟ್ ವತಿಯಿಂದ ವಿವೇಕಾನಂದ ವೃತ್ತದಲ್ಲಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ನಂತರ ಸಿಹಿ ವಿತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ನಗರ ಪ್ರಧಾನ ಕಾರ್ಯದರ್ಶಿ ಬಿ ಎಂ ರಘು, ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ರಾಕೇಶ್ ಭಟ್, ಕೊರಿಯರ್ ವೆಂಕಟೇಶ್, ಕೆ ಎಮ್ ಪಿ ಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್, ನಂದೀಶ್ ನಾಯಕ್, ಆನಂದ್,ಶಿವರಾಜ್, ರಾಘವೇಂದ್ರ ಪ್ರದೀಪ್ ಮತ್ತಿತರರು ಪಾಲ್ಗೊಂಡಿದ್ದರು.
