ಮೈಸೂರು, ಮಾ.6: ಮನುಷ್ಯನ ಒಡನಾಡಿಯಾಗಿರುವ ಪ್ರಾಣಿ ಪಕ್ಷಿಗಳ ಜೀವ ಸಂಕುಲವನ್ನುಳಿಸಲು ಸಮಾಜದಲ್ಲಿರುವ ಸಹೃದಯಿ ನಾಗರಿಕರು ಮುಂದಾಗಬೇಕೆಂದು ಖ್ಯತ ನಟ ಪ್ರಜ್ವಲ್ ದೇವರಾಜ್ ಕರೆ ನೀಡಿದ್ದಾರೆ.
ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಹಮ್ಮಿಕೊಂಡಿರುವ
2 ತಿಂಗಳ ಮೂಕ ಸ್ಪಂದನೆ ‘ನೀರುಣಿಸಿ-ಜೀವವನ್ನುಳಿಸಿ ವಿಶೇಷ ಅಭಿಯೋಜನೆಯನ್ನು ನಗರದ ಚಾಮುಂಡಿಪುರಂ ನಲ್ಲಿರುವ ಟ್ರಸ್ಟ್ ಕಚೇರಿಯಲ್ಲಿ ಮೂಕ ಸ್ಪಂದನ ಅಭಿಯಾನದ ಸಾಮಗ್ರಿಗಳನ್ನು ಬಿಡುಗಡೆಗೊಳಿಸಿ ಪ್ರಜ್ವಲ್ ಮಾತನಾಡಿದರು.
ಬೇಸಿಗೆಯ ರಣಬಿಸಿಲಿನ ತಾಪಮಾನದ ತೀವ್ರತೆಯಿಂದಾಗಿ ಪ್ರಾಣಿ ಪಕ್ಷಿಸಂಕುಲ ಬಳಲುತ್ತವೆ. ಕುಡಿಯುವ ನೀರು ಆಹಾರಕ್ಕಾಗಿ ಪರಿತಪಿಸುತ್ತವೆ. ಆದ್ದರಿಂದ ಪರಿಸರ ರಕ್ಷತಿ ರಕ್ಷಿತಃ ಪರಿಸರ ಸ್ನೇಹಿ ತಂಡ ಹಾಗೂ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್
2ತಿಂಗಳ ಕಾಲ ಮೂಕ ಸ್ಪಂದನೆ ಎಂಬ ‘ನೀರುಣಿಸಿ-ಜೀವವನ್ನುಳಿಸಿ, ಅಭಿಯೋಜನೆಯನ್ನು ಮೈಸೂರು ನಗರದ ಸುತ್ತಮುತ್ತ ಪ್ರದೇಶಗಳಲ್ಲಿ ರೂಪಿಸುತ್ತಿರುವುದು ಅತ್ಯುತ್ತಮ ಕೆಲಸ ಎಂದು ತಿಳಿಸಿದರು.
ಬೇಸಿಗೆ ಆರಂಭಗೊಂಡಿದ್ದು ಪ್ರಾಣಿ ಪಕ್ಷಿಗಳು ತಮ್ಮ ಅಸ್ಥಿತ್ವಕ್ಕಾಗಿ ಹೋರಾಟ
ನಡೆಸಬೇಕಿದೆ, ಜನವಸತಿ ಮತ್ತು ಜನಸಂಖ್ಯೆಗನುಗುಣವಾಗಿ ಮೊಬೈಲ್ ಮತ್ತು ಇತರೆ ತರಂಗದಿಂದಾಗಿ ಹಾಗೂ ಅಗತ್ಯ ನಾಗರೀಕ ಸವಲತ್ತುಗಳ ನೆರಳಿನಡಿ ಈಗಾಗಲೇ ಸಂತತಿ ಕ್ಷೀಣಿಸುತ್ತಿದೆ, ಹಲವಾರು ಪಕ್ಷಿಗಳು ನಶಿಸಿ ಹೋಗುತ್ತಿವೆ. ಅಳಿದು ಉಳಿದಿವೆಯೇನೋ ಎಂಬಂತಿರುವ ಜನತೆಯ ಮಧ್ಯೆಯೇ ಬದುಕಿ ಬೆರೆತು ಜೀವಿಸುವ ಪ್ರಾಣಿಪಕ್ಷಿ ಸಂಕುಲ ಆಹಾರ ನೀರಿಗಾಗಿ ಪರಿತಪಿಸುವಂತಾಗಿದೆ.
ಈ ಭೂಮಂಡಲದಲ್ಲಿ ಸರ್ವಜೀವಿಗಳಿಗೂ ಸಮಬಾಳು ಸ್ವತಂತ್ರ ಇರಬೇಕು ಮಾನವೀಯ ದೃಷ್ಟಿಯಿಂದ ಅವುಗಳ ಬಗ್ಗೆ ಕಾಳಜಿವಹಿಸಬೇಕೆಂದು ಅವರು ಕಳಕಳಿಯಿಂದ ಮನವಿ ಮಾಡಿದರು.
ಸಮಾಜಮುಖಿ ಟ್ರಸ್ಟ್ ನ ಈ ಸೇವಾ ಕಾರ್ಯ ನಿಜಕ್ಕೂ ಶ್ಲಾಘನೀಯ ಇವರ ಈ ಕೆಲಸ ಯಶಸ್ವಿಗೊಳ್ಳಲಿ ಸಾರ್ವಜನಿಕರು ಈ ಸೇವಾ ಕಾರ್ಯಕ್ಕೆ ಕೈ ಜೋಡಿಸಲಿ ಎಂದು ಹೇಳಿದರು
ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಮ್ ಅಯ್ಯಂಗಾರ್ ಮಾತನಾಡಿ,ನಮ್ಮ ಈ ಅಭಿಯಾನಕ್ಕೆ ಸಾರ್ವಜನಿಕರು ಕೈಜೋಡಿಸಬೇಕು ಎಂದು ಕೋತಿದತು.
ನಗರದ ಪ್ರತಿಯೊಂದು ವಾರ್ಡ್ ನಲ್ಲಿ ಪ್ರಾಣಿ ಮತ್ತು ಪಕ್ಷಿಗಳಿಗೆ ನೀರಿನ ತೊಟ್ಟಿ ಹಾಗೂ ಮರಗಳಿಗೆ ನೀರಿನ ತಟ್ಟೆ ಹಾಗೂ ಆಹಾರದ ತಟ್ಟೆ ನೆಡಲಾಗುವುದು ಹಾಗೆಯೇ ಸುತ್ತಮುತ್ತ ಇರುವವರಿಗೆ ಪ್ರತಿನಿತ್ಯ ಪ್ರಾಣಿ ಪಕ್ಷಿಗಳಿಗೆ ಆಹಾರ ನೀಡುವಂತೆ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಎಲ್ಲರೂ ಅವರವರ ಮನೆಗಳ ತಾರಸಿಯ ಮೇಲೆ, ಮರಗಳ ಕೆಳಗೆ, ಮನೆಯ ಮುಂದಿನ ರಸ್ತೆಯ ಇಕೆಲಗಳಲ್ಲಿ ಪ್ರಾಣಿ
ಪಕ್ಷಿಗಳ ಬಾಯಿಗೆ ಎಟುಕುವಂತೆ ಮಣ್ಣಿನ ಬಟ್ಟಲು ಅಥವಾ ಸಣ್ಣ ಸಿಮೆಂಟ್ ತೊಟ್ಟಿಗಳನ್ನಿಟ್ಟು ಅದರಲ್ಲಿ ಶುದ್ಧ ನೀರನ್ನು ತುಂಬಿಡಬೇಕು. ಆಹಾರ ಧಾನ್ಯ ಮಿತವಾಗಿಟ್ಟು ಅವುಗಳನ್ನು ಸಲುಹಬೇಕು ಎಂದು ವಿಕ್ರಮ್ ಅಯ್ಯಂಗಾರ್ ಕೋರಿದರು.
ಪ್ರಾಣಿ ಪಕ್ಷಿ ಸಂಕುಲವನ್ನುಳಿಸಿಕೊಳ್ಳುವುದು
ನಾಗರಿಕ ಸಮಾಜದಲ್ಲಿರುವ ನಮ್ಮಗಳ ಆದ್ಯ ಕರ್ತವ್ಯವೆಂದು ಭಾವಿಸಬೇಕು. ನಮ್ಮೊಟ್ಟಿಗಿರುವ ಜೀವರಾಶಿಗಳನ್ನೂ ರಕ್ಷಿಸಿ ಅವುಗಳ ಬಗೆಗೆ ಅನುಕಂಪ ತೋರಬೇಕಾದ್ದು ಪ್ರತಿಯೊಬ್ಬ ನಾಗರಿಕರ ಕರ್ತವಾಗಬೇಕಿದೆ ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಪರಿಸರ ಪ್ರೇಮಿ ಪ್ರದೀಪ್ ಗೌಡ,ಅಮಿತ್ ಕುಮಾರ್, ಮಹಾನ್ ಶ್ರೇಯಸ್, ಸಚಿನ್ ನಾಯಕ್, ಮತ್ತಿತರರು ಹಾಜರಿದ್ದರು.