ಬೀದಿ ದೀಪ ಅಳವಡಿಕೆಗೆ ಆಗ್ರಹಿಸಿಪೌರಯುಕ್ತರಿಗೆ ಕರವೇ ಮನವಿ

Spread the love

(ವರದಿ:ಸಿದ್ದರಾಜು,ಕೊಳ್ಳೇಗಾಲ)

ಕೊಳ್ಳೇಗಾಲ: ಪಟ್ಟಣದ ನಡುವೆ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 209 ರಲ್ಲಿನ ಡಾ.ಅಂಬೇಡ್ಕರ್ ಪ್ರತಿಮೆ ಇರುವ ವೃತ್ತಕ್ಕೆ ಬೀದಿ ದೀಪಗಳನ್ನು ಅಳವಡಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ( ಪ್ರವೀಣ್ ಶೆಟ್ಟಿ ಬಣ) ಪದಾಧಿಕಾರಿಗಳು ನಗರಸಭೆ ಪೌರಯುಕ್ತರಿಗೆ ಮನವಿ ಸಲ್ಲಿಸಿದರು.

ಕರವೇ ತಾಲ್ಲೂಕು ಅಧ್ಯಕ್ಷ ಜಗದೀಶ್ ಶಾಸ್ತ್ರೀ ನೇತೃತ್ವದಲ್ಲಿ ನಗರಸಭೆ ಕಾರ್ಯಾಲಯಕ್ಕೆ ತೆರಳಿ ಪೌರಯುಕ್ತ ಪರಶಿವಯ್ಯ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಪೌರಯುಕ್ತರು ಕೂಡಲೇ ಕ್ರಮ ಜರುಗಿಸುವ ಭರವಸೆ ನೀಡಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಧ್ಯಕ್ಷ ಜಗದೀಶ್ ಶಾಸ್ತ್ರಿ ಅವರು ಪಟ್ಟಣದ ಮಧ್ಯಭಾಗದಲ್ಲಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಡಾ.ಅಂಬೇಡ್ಕರ್ ವೃತ್ತ, ಸರ್ಕಾರಿ ಆಸ್ಪತ್ರೆ ಮುಂಭಾಗ ಸೇರಿದಂತೆ ಬೆಂಗಳೂರು ರಸ್ತೆಯ ಜಿ. ಪಿ ಮಲ್ಲಪ್ಪಪುರಂ ನಿಂದ ಐಬಿ ವೃತ್ತದ ವರೆಗೆ ಬೀದಿ ದೀಪಗಳು ಇಲ್ಲದೆ ವಾಹನ ಸವಾರರು ಹಾಗೂ ಪಾದಚಾರಿಗಳು ಪರದಾಡುವಂತಾಗಿದೆ ಎಂದು ಹೇಳಿದರು.

ಡಾ.ಅಂಬೇಡ್ಕರ್ ವೃತ್ತದಲ್ಲಿ ರಾತ್ರಿ ವೇಳೆ ಗ್ರಾಮಾಂತರ ಪ್ರದೇಶಗಳಿಗೆ ತೆರಳುವವರು ಕತ್ತಲೆಯಲ್ಲೆ ನಿಲ್ಲಬೇಕಿದೆ. ಆದರೂ ಸಂಬಂಧ ಪಟ್ಟ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸದೇ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿದರು.

ಈಗಾಗಲೇ ಅಚ್ಗಾಲ್ ವೃತ್ತದಿಂದ ಐಬಿ ವೃತ್ತದ ವರೆಗೆ ಹೆದ್ದಾರಿಯಲ್ಲಿ ವಿದ್ಯುತ್ ಬೀದಿ ದೀಪಗಳನ್ನು ಅಳವಡಿಸಲಾಗಿದೆ. ಅದೇ ರೀತಿ
ಡಾ.ಅಂಬೇಡ್ಕರ್ ವೃತ್ತ, ಸರ್ಕಾರಿ ಆಸ್ಪತ್ರೆ ಮುಂಭಾಗ ಸೇರಿದಂತೆ ಬೆಂಗಳೂರು ರಸ್ತೆಯ ಜಿ. ಪಿ ಮಲ್ಲಪ್ಪಪುರಂ ನಿಂದ ಐಬಿ ವೃತ್ತದ ವರೆಗೆ ಬೀದಿ ದೀಪವನ್ನು ಅಳವಡಿಸುವಂತೆ ಒತ್ತಾಯಿಸಿದರು.

ಕೂಡಲೇ ಕ್ರಮ ವಹಿಸದೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಹೋರಾಟ ನಡೆಸ ಬೇಕಾಗುತ್ತದೆ ಎಂದು ಜಗದೀಶ್ ಶಾಸ್ತ್ರಿ ಎಚ್ಚರಿಸಿದರು.

ಈ ಸಂಧರ್ಭದಲ್ಲಿ ಕರವೇ(ಪ್ರವೀಣ್ ಶೆಟ್ಟಿ ಬಣ) ಉಪಾಧ್ಯಕ್ಷರಾದ ಯೂನುಸ್ ಪಾಷ, ರವಿಕುಮಾರ್,ಸ್ವೀಟ್ ಗಿರಿ, ಪ್ರಧಾನ ಕಾರ್ಯದರ್ಶಿ ಮಹೇಶ್. ಎಂ, ರೇಚಣ್ಣ, ಹೊಸ ಹಂಪಾಪುರ ಗ್ರಾಮಘಟಕ ಅಧ್ಯಕ್ಷ ರೇವಣ್ಣ, ಕಾರ್ಯಕರ್ತರು ಹಾಗೂ ಪದಾಧಿಕಾರಿಗಳು ಹಾಜರಿದ್ದರು.