ಕೊಳ್ಳೇಗಾಲ: ಪಟ್ಟಣದಲ್ಲಿ ಸಂಘಟನ್ ಸೃಜನ್ ಅಭಿಯಾನ 2 ಹಾಗೂ ಕೊಳ್ಳೇಗಾಲ ವಿಧಾನಸಭಾ ವ್ಯಾಪ್ತಿಯ ಕೊಳ್ಳೇಗಾಲ ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಆಯ್ಕೆ ಸಂಬಂಧ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಲಹೆ ಸಭೆಯನ್ನು ನಡೆಸಲಾಯಿತು.
ಪಟ್ಟಣದ ಭ್ರಮರಾಂಬ ಕಲ್ಯಾಣ ಮಂಟಪದಲ್ಲಿ ನಡೆದ
ಕಾರ್ಯಕ್ರಮವನ್ನು ಶಾಸಕ ಎ. ಆರ್. ಕೃಷ್ಣಮೂರ್ತಿ ರವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಾತ ನಾಡಿದ ಶಾಸಕ ಎ. ಆರ್. ಕೃಷ್ಣಮೂರ್ತಿರವರು ರಾಜ್ಯ ಹಾಗೂ ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲ ಪಡಿಸುವ ಸಲುವಾಗಿ ಪ್ರತಿ 3 ವರ್ಷಗಳಿಗೊಮ್ಮೆ ಪಕ್ಷದ ಅಧ್ಯಕ್ಷರುಗಳು ಪದಾಧಿಕಾರಿಗಳನ್ನು ಬದಲಾವಣೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ,ಹಾಗೂ ರಾಹುಲ್ ಗಾಂಧಿ, ಸೋನಿಯಾ ಗಾಂಧಿರವರ ಆದೇಶದ ಮೇರೆಗೆ ರಾಜ್ಯ ಕಾಂಗ್ರೆಸ್ ವರಿಷ್ಟರಾದ ಸಿದ್ದರಾಮಯ್ಯ, ಡಿಕೆ ಶಿವಕುಮಾರ್, ಹೆಚ್ ಸಿ ಮಹದೇವಪ್ಪ, ಜಿ. ಪರಮೇಶ್ವರ್, ಪ್ರಿಯಾಂಕ ಖರ್ಗೆಯವರ ಮಾರ್ಗದರ್ಶನದಲ್ಲಿ ರಾಜ್ಯದ ಎಲ್ಲಾ ತಾಲ್ಲೂಕು ಹಾಗೂ ಜಿಲ್ಲಾ ಅಧ್ಯಕ್ಷ ರುಗಳನ್ನು ಬದಲಾವಣೆ ಮಾಡಲಾಗುತ್ತಿದೆ. ಅದರಂತೆ ನಮ್ಮ ಜಿಲ್ಲೆಯಲ್ಲಿಯೂ ಕೂಡ ಜಿಲ್ಲಾ ಅಧ್ಯಕ್ಷರನ್ನು ಬದಲಾವಣೆ ಮಾಡಲಾಗಿದ್ದು ಈಗ ತಾಲ್ಲೂಕು, ಬ್ಲಾಕ್ ಅಧ್ಯಕ್ಷರನ್ನು ಬದಲಾವಣೆ ಮಾಡಲು ಪ್ರಕ್ರಿಯೆಗಳು ನಡೆಯುತ್ತಿರುವ ಹಿನ್ನೆಲೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಸ್ಥಾನಕ್ಕೆ ಕೊಳ್ಳೇಗಾಲ ಹಾಗೂ ಯಳಂದೂರು ತಾಲ್ಲೂಕುಗಳಲ್ಲಿ ಹಲವಾರು ಅಭ್ಯರ್ಥಿಗಳು ಆಕಾಂಕ್ಷಿಗಳಾಗಿ ಅರ್ಜಿಯನ್ನು ಸಲ್ಲಿಸಿದ್ದಾರೆ ಎಂದು ತಿಳಿಸಿದರು.
ಈ ಅಭ್ಯರ್ಥಿಗಳಲ್ಲಿ ಕೊಳ್ಳೇಗಾಲ ಹಾಗೂ ಯಳಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಯಾರನ್ನ ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಪಕ್ಕದ ಮುಖಂಡರು, ಕಾರ್ಯಕರ್ತರಿಂದ ಸಲಹೆ ಸೂಚನೆ ಗಳನ್ನು ಪಡೆಯಲು ಕೆಪಿಸಿಸಿ ವೀಕ್ಷಕರಾಗಿ ಪುಷ್ಪ ಅಮರ್ನಾಥ್ ರವರು ಆಗಮಿಸಿದ್ದಾರೆ. ಅವರು ತಮ್ಮಿಂದ ಪಡೆದ ಸಲಹೆ ಸೂಚನೆ ಗಳನ್ನು ಕೆಪಿಸಿಸಿ ರಾಜ್ಯಾಧ್ಯಕ್ಷರಾದ ಬಿ.ಕೆ ಹರಿಪ್ರಸಾದ್ ಅವರಿಗೆ ತಲುಪಿ ಸುತ್ತಾರೆ. ಅವರು ಬ್ಲಾಕ್ ಅಧ್ಯಕ್ಷರುಗಳನ್ನು ಅಂತಿಮವಾಗಿ ಆಯ್ಕೆ ಮಾಡುತ್ತಾರೆ ಎಂದು ಹೇಳಿದರು.
ಆದ್ದರಿಂದ ಪಕ್ಷಕ್ಕೆ ನಿಷ್ಠಾವಂತರಾಗಿ ಪ್ರಾಮಾಣಿಕವಾಗಿ ದುಡಿಯುವ ವ್ಯಕ್ತಿಗಳ ಅವಶ್ಯಕತೆ ಇರುವುದರಿಂದ ಸದೃಢವಾದ ವ್ಯಕ್ತಿಗಳು ಆಯ್ಕೆಯಾಗಬೇಕು, ಪಕ್ಷದ ಸಂಘಟನೆಗಾಗಿ ತಮ್ಮ ತನು, ಮನ, ಧನ ಎಲ್ಲವನ್ನು ಅರ್ಪಿಸಿ ಕಂಕಣತೊಟ್ಟು ನಿಲ್ಲಬೇಕು, ಕಾರ್ಯಕರ್ತ ರನ್ನು ಸಂಘಟಿಸುವ ಛಲ ಇರಬೇಕು ಸಭೆಯಲ್ಲಿರುವ ಪಕ್ಷದ ಕಾರ್ಯಕರ್ತರು ಮುಖಂಡರುಗಳು ಅಂತಹ ಅಭ್ಯರ್ಥಿಗಳ ಹೆಸರು ಗಳನ್ನು ವೀಕ್ಷಕರ ಬಳಿ ಸೂಚಿಸುವಂತೆ ಕರೆ ನೀಡಿದರು.
ಇದೇ ವೇಳೆ ಕಳೆದ ವಾರ ಚಾಮರಾಜನಗರದಲ್ಲಿ ನಡೆದ 2026 ನೇ ಅಂತರರಾಷ್ಟ್ರೀಯ ಬೌದ್ದ ಮಹಾ ಸಮ್ಮೇಳ ನದ ಆಚರಣಾ ಸಮಿತಿಯ ಅಧ್ಯಕ್ಷತೆ ವಹಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ ಹಿನ್ನೆಲೆಯಲ್ಲಿ ಶಾಸಕ ಎ. ಆರ್. ಕೃಷ್ಣಮೂರ್ತಿಯವರನ್ನು ಕೊಳ್ಳೇಗಾಲ ನಗರಸಭೆಯ ಮಾಜಿ ಸದಸ್ಯರುಗಳು ಸನ್ಮಾನಿಸಿ ಗೌರವಿಸಿದರು.
ಸಭೆಯ ಬಳಿಕ ಕೆಪಿಸಿಸಿ ವೀಕ್ಷಕರಾಗಿ ಆಗಮಿಸಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷೆ ಪುಷ್ಪ ಅಮರ್ ನಾಥ್ ಅವರು ಪಕ್ಷದ ಕಾರ್ಯಕರ್ತರು ಮುಖಂಡರುಗಳುಗಳಿಂದ ಸಲಹೆ ಸೂಚನೆಗಳನ್ನು ಪಡೆದರು,
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜೆ ಯೋಗೇಶ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಚಾಮರಾಜನಗರ ಜಿಲ್ಲಾ ಅಧ್ಯಕ್ಷ ಚಂದ್ರು, ಕೊಳ್ಳೇಗಾಲ ತಾಲ್ಲೂಕು ಅಧ್ಯಕ್ಷ ರಾಜೇಂದ್ರ, ಮುಖಂಡರಾದ ವಡ್ಡಗೆರೆದಾಸ್, ನಾಗರಾಜು, ಬಸ್ತೀಪುರ ಶಾಂತರಾಜು, ಮಂಜುನಾಥ್, ಚೇತನ್ ದೊರೆರಾಜ್, ಜಿ. ಎನ್. ಲೊಕೇಶ್, ತಿಮ್ಮರಾಜಿಪುರ ರಾಜು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್ ಮತ್ತಿತರರು ಹಾಜರಿದ್ದರು
