ಬೆಂಗಳೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ಬೆಂಗಳೂರು ಪೂರ್ವ ಜಿಲ್ಲಾ ಮಾರುತಿ ಸೇವಾ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಕೆ ಜೆ ಜಾರ್ಜ್ ಹಾಗೂ ಕೆಪಿಸಿಸಿ ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಕೆ. ನಂದಕುಮಾರ್ ಅವರ ಶಿಫಾರಸ್ಸಿನ ಮೇರೆಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಅಧ್ಯಕ್ಷ ಕೆ ಪುಟ್ಟಸ್ವಾಮಿ ಗೌಡರ ಅನುಮೋದನೆಯೊಂದಿಗೆ ಕೆಪಿಸಿಸಿ ಕಾರ್ಮಿಕ ವಿಭಾಗದ ಬೆಂಗಳೂರು ಪೂರ್ವ ಜಿಲ್ಲಾ ಮಾರುತಿ ಸೇವಾ ನಗರ ಬ್ಲಾಕ್ ಪ್ರಧಾನ ಕಾರ್ಯದರ್ಶಿಯಾಗಿ ಆನಂದ್ ಸಿಂಗ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ ಎಂದು
ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷ ದೊಮ್ಮಲೂರು ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಈ ಹೊಣೆಗಾರಿಕೆಯನ್ನು ನಿಷ್ಠೆಯಿಂದ ನಿರ್ವಹಿಸುತ್ತಾ, ರಾಜ್ಯ ಮತ್ತು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಹಾಗೂ ತಮ್ಮ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಸ್ಥಳೀಯ ನಾಯಕರುಗಳ ಸಹಕಾರದೊಂದಿಗೆ ನೀಡಲಾಗಿರುವ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿರ್ವಹಿಸಿ. ಪಕ್ಷದ ಸಂಘಟನೆಗೆ ಹಾಗೂ ಕಾರ್ಮಿಕರ ಏಳಿಗೆಗಾಗಿ ಶ್ರಮಿಸುವಂತೆ ಸೂಚಿಸಲಾಗಿದ್ದು,ಈ ದಿಸೆಯಲ್ಲಿ ಹೆಚ್ಚಿನ ಯಶಸ್ಸು ದೊರೆಯಲೆಂದು ದೊಮ್ಮಲೂರು ಶ್ರೀನಿವಾಸ ರೆಡ್ಡಿ ಹಾರೈಸಿದ್ದಾರೆ.