ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಕೃಷ್ಣ ಜನ್ಮಾಷ್ಟಮಿ

Spread the love

ಮೈಸೂರು: ಅಗ್ರಹಾರದಲ್ಲಿರುವ ಕೃಷ್ಣರಾಜ ಪೊಲೀಸ್ ಠಾಣೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷ ಕೂಡಾ ಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.

ಕೆ ಆರ್ ಠಾಣೆಯ ವೃತ್ತ ನಿರೀಕ್ಷಕರಾದ ನಾಗೇಗೌಡ ಎನ್ ಸಿ ಅವರ ನೇತೃತ್ವದಲ್ಲಿ
ಠಾಣೆಯಲ್ಲಿರುವ ಕೃಷ್ಣನ ವಿಗ್ರಹವನ್ನು ವಿಶೇಷವಾಗಿ ಅಲಂಕರಿಸಿ ಪೂಜಿಸಿ ನಂತರ ಪ್ರಸಾದ ವಿತರಿಸಲಾಯಿತು.

ಈ ವೇಳೆ ಕೆಆರ್ ಪೊಲೀಸ್ ಠಾಣೆಯ ಸಬ್ ಇನ್ಸ್ ಪೆಕ್ಟರ್ ಹರೀಶ್ ಹಾಗೂ ಪಿ ಆರ್ ಮಂಜು ಮತ್ತು ಮಹಿಳಾ ಪೇದೆಗಳಾದ ನಂದಿನಿ, ಅರ್ಪಿತ, ಆಶಿ ಲೋಕೇಶ್, ಸಿಬ್ಬಂದಿಗಳು ಹಾಜರಿದ್ದರು.

ಈ‌ ಸಂದರ್ಭದಲ್ಲಿ ಸ್ಥಳೀಯ ಮುಖಂಡರಾದ ಕೆಆರ್ ಬ್ಯಾಂಕ್ ಉಪಾಧ್ಯಕ್ಷ ಬಸವರಾಜ್ ಬಸಪ್ಪ, ನಜರ್ಬಾದ್ ನಟರಾಜ್, ಜಿ ರಾಘವೇಂದ್ರ, ನವೀನ್ ಕೆಂಪಿ, ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ವಿನೋದ್ ರಾಜ್, ಸಂತೋಷ್ ಕಿರಾಲು, ನಿವೃತ್ತ ಪೊಲೀಸ್ ಅಧಿಕಾರಿ ಬೀರೇಗೌಡ, ಹರೀಶ್ ನಾಯ್ಡು, ಎಸ್ ಎನ್ ರಾಜೇಶ್, ರಾಕೇಶ್, ರವಿಚಂದ್ರ, ಕನಕ ಮೂರ್ತಿ ಮತ್ತಿತರರು ಹಾಜರಿದ್ದರು.