ಮೈಸೂರು: ನಾವು ಒಳ್ಳೆಯ ಸಂಸ್ಕೃತಿ ಮತ್ತು ಸಂಪ್ರದಾಯ ಬೆಳೆಸಿಕೊಳ್ಳಬೇಕು, ಇಂತಹ ಕಾರ್ಯಕ್ರಮಗಳನ್ನು ಪ್ರತಿಯೊಂದು ಮಠಗಳು ಹಾಗೂ ಕೆಲವು ಶಾಲೆಯಲ್ಲಿ ಆಚರಿಸುತ್ತಿರುವುದು ಅರ್ಥಪೂರ್ಣವಾಗಿದೆ
ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ರವಿಶಾಸ್ತ್ರಿ ತಿಳಿಸಿದರು.
ಸರಸ್ವತಿಪುರಂನಲ್ಲಿರುವ ಶ್ರೀ ಕೃಷ್ಣ ಧಾಮದಲ್ಲಿ ಶ್ರೀ ಕೃಷ್ಣ ಮಿತ್ರ ಮಂಡಳಿ ಹಾಗೂ ಶ್ರೀ ಕೃಷ್ಣ ಟ್ರಸ್ಟ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮಕ್ಕಳಿಗೆ ಆಯೋಜಿಸಿದ್ದ
ಛದ್ಮಾ ವೇಷ ಸ್ಪರ್ಧೆ ಮತ್ತಿತರ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮಕ್ಕಳಿಗೆ ನಮ್ಮ ಸಂಸ್ಕೃತಿ, ಆಚಾರ, ವಿಚಾರ ಗಳನ್ನು ಪರಿಚಯಿಸಬೇಕು. ಇದರಿಂದ ಅವರು ಸುಸಂಸ್ಕೃತರಾಗಿ ಬೆಳೆಯಲು ಸಹಕಾರಿ ಆಗುತ್ತದೆ. ಶ್ರೀಕೃಷ್ಣನ ಬಾಲ್ಯದ ಲೀಲೆಗಳು ಸಂಸ್ಕೃತಿಯಲ್ಲಿ ಮಿಳಿತವಾಗಿದ್ದು ಪ್ರತಿಯೊಬ್ಬರನ್ನು ಆಕರ್ಷಿಸುತ್ತದೆ ಎಂದು ಹೇಳಿದರು.
ಮನೆಯಲ್ಲಿ ಮಕ್ಕಳಿಗೆ ಉತ್ತಮವಾದ ವಾತಾವರಣ ಕಲ್ಪಿಸಿದರೆ ಮಾತ್ರ ಮಕ್ಕಳು ಸುಸಂಸ್ಕೃತರಾಗಿ ಬೆಳೆಯಲು ಸಾಧ್ಯ. ಆದ್ದರಿಂದ ಪೋಷಕರು ಮಕ್ಕಳ ಮುಂದೆ ಯಾವುದೇ ರೀತಿಯ ಜಗಳವಾಡದೆ ತಾಳ್ಮೆಯಿಂದ ವರ್ತಿಸಬೇಕು ಎಂದು ಸಲಹೆ ನೀಡಿದರು.
ಸ್ಪರ್ಧೆಯಲ್ಲಿ 50ಕ್ಕೂ ಹೆಚ್ಚು ಮಕ್ಕಳು ಕೃಷ್ಣ ರಾಧೆ ವೇಷ ಭೂಷಣ ಧರಸಿ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು.
ಸ್ಪರ್ಧಿಸಿದ್ದ ಮಕ್ಕಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ನೀಡಲಾಯಿತು.
ನಂತರ ಶ್ರೀ ಕೃಷ್ಣ ಲೀಲೋತ್ಸವ ಹಾಗೂ ರಾಜಬೀದಿಯಲ್ಲಿ ಶ್ರೀ ಕೃಷ್ಣನ ಭವ್ಯ ಮಾರವಣಿಗೆ ಭಜನೆ ಹಾಗೂ ವಿವಿಧ ಕಲಾತಂಡಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.
ಅನಂತರ ಮೊಸರು ಕುಡಿಕೆ ಕಾರ್ಯಕ್ರಮ ನೆರವೇರಿತು ಮತ್ತು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.

ಶ್ರೀ ಕೃಷ್ಣ ಟ್ರಸ್ಟ್ ಉಪಾಧ್ಯಕ್ಷರು ರವಿಶಾಸ್ತ್ರಿ, ಚಂದ್ರಶೇಖರ್, ಕಾರ್ಯದರ್ಶಿ ಕೆ ವಿ ಶ್ರೀಧರ್, ಶ್ರೀ ಕೃಷ್ಣ ಮಿತ್ರ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣನ್,ಉಪಾಧ್ಯಕ್ಷ ಶ್ರೀವತ್ಸ ರಾವ್, ಕಾರ್ಯದರ್ಶಿ ಪಿ ಜಿ ಗುರುಪ್ರಸಾದ್, ರಾಘವೇಂದ್ರ ರಾವ್, ಪುರಾಣಿಕ್, ಮೋಹನ್, ಸುಬ್ರಹ್ಮಣ್ಯ ತಂತ್ರಿ ಮತ್ತಿತರರು ಹಾಜರಿದ್ದರು.
