ಮೈಸೂರು: ಕೆಆರ್ಎಸ್ ಹಿನ್ನೀರಿನಲ್ಲಿ ಈಜಲು ಹೋಗಿ ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟ ಹಿನ್ನೆಲೆಯಲ್ಲಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ವಾಣಿಜ್ಯ ಹಾಗೂ ಕೈಗಾರಿಕೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ ಎಸ್. ಸೆಲ್ವ ಕುಮಾರ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಅವರು ಭೇಟಿ ನೀಡಿ ಪರಿಶೀಲಿಸಿದರು.
ಎರಡು ದಿನದ ಹಿಂದೆ ಮಂಡ್ಯ ನರ್ಸಿಂಗ್ ಕಾಲೇಜಿನ ಆರು ವಿದ್ಯಾರ್ಥಿಗಳು ಮೀನಾಕ್ಷಿಪುರಕ್ಕೆ ಪ್ರವಾಸ ಬಂದು ಕೆ ಆರ್ ಎಸ್ ಹಿನ್ನೀರಿನಲ್ಲಿ ಇಳಿದು ಆಟ ಆಡುತ್ತಿದ್ದರು.ಅವರಲ್ಲಿ ಮೂವರು ವಿದ್ಯಾರ್ಥಿಗಳು ನೀರುನ ಸೆಳೆತದಿಂದ ಹೊರಬರಲಾಗದೆ ಮೃತಪಟ್ಟಿದ್ದರು.
ಇದರಿಂದ ಎಚ್ಚೆತ್ತ ಮೈಸೂರು ಜಿಲ್ಲಾಡಳಿತ ಪ್ರವಾಸಿಗರ ಸುರಕ್ಷತೆಗೆ ಮುಂದಾಗಿದೆ.
ಪ್ರವಾಸಿಗರ ದೃಷ್ಟಿಯಿಂದ ಸೂಚನಫಲಕ ಅಳವಡಿಕೆ ಮಾಡಿ ನೀರಿನ ಸೆಳೆತ ಹಾಗೂ ಸುಳಿ ಇರುವ ಕಡೆ ನೀರಿಗೆ ಇಳಿಯಬಾರದೆಂದು ಸೂಚನೆ ನೀಡಲಾಗಿದೆ.
ಜಿಲ್ಲಾ ಪಂಚಾಯತ್ ಸಿಇಒ ಎಸ್.ಯುಕೇಶ್ ಕುಮಾರ್, ಮೈಸೂರು ತಹಶೀಲ್ದಾರ್ ಮಹೇಶ್ ಹಾಗೂ ಅಧಿಕಾರಿಗಳು ಜಿಲ್ಲಾಧಿಕಾರಿಗಳಿಗೆ ಸಾಥ್ ನೀಡಿದರು.