ಮಂಡ್ಯ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿರುವುದರಿಂದ ಜಲಾಶಯಗಳಿಗೆ ಹೆಚ್ಚು ನೀರು ಹರಿದು ಬರುತ್ತಿದ್ದು ಬಹುತೇಕ ಜಲಾಶಯಗಳು ಭರ್ತಿ ಆಗುತ್ತಿವೆ.
ಕಾವೇರಿ ಜಲಾನಯನ ಪ್ರದೇಶದಲ್ಲೂ ಭಾರಿ ಮಳೆಯಾಗುತ್ತಿದ್ದು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿರುವ ಕೆಆರ್ ಎಸ್ ಜಲಾಶಯಕ್ಕೆ ಭಾರಿ ಪ್ರಮಾಣದ ನೀರು ಹರಿದು ಬರುತ್ತಿದೆ.
ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ 124 ಅಡಿಯಿರವ ಕೆಆರ್ ಎಸ್ ಜಲಾಶಯ ಈಗಾಗಲೇ 120 ಅಡಿ ಭರ್ತಿಯಾಗಿದ್ದು,ಪೂರ್ತಿ ಭರ್ತಿಯಾಗಲು ಇನ್ನು ನಾಲ್ಕು ಅಡಿ ಮಾತ್ರ ಬಾಕಿ ಇದೆ.
ಇನ್ನೊಂದು ವಾರದಲ್ಲಿ ಭರ್ತಿಯಾಗುವ ಸಾಧ್ಯತೆ ಇದ್ದು ಹಾಗೇನಾದರೂ ಆದರೆ ಇದೇ ಮೊದಲ ಬಾರಿಗೆ ಕೆಆರ್ ಎಸ್ ಜಲಾಶಯ ಜೂನ್ ತಿಂಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಭರ್ತಿಯಾದಂತಾಗುತ್ತದೆ.
ಕೆಆರ್ ಎಸ್ ಜಲಾಶಯದ ನೀರಿನ ಸಂಗ್ರಹ ಮಟ್ಟ 43 ಟಿಎಂಸಿ. ಇಂದು 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಕೊಡಗು, ಕೋಲಾರ, ಬಳ್ಳಾರಿ, ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.