ಉಡುಪಿ: ಉಡುಪಿ ಜಿಲ್ಲೆಯ ಶಂಕರಪುರ ಗ್ರಾಮದಲ್ಲಿರುವ ಸರ್ವಕಲಾ ಸೇವಾ ಟ್ರಸ್ಟ್ ವತಿಯಿಂದ ಕೃಷಿ ಮಾಹಿತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಈ ಕಾರ್ಯಕ್ರಮದಲ್ಲಿ ಸರ್ಕಾರಿ ಶಾಲಾ ಮಕ್ಕಳು ಅಚ್ಚಡ ಮತ್ತು ಕಡಪಾಡಿ ತ್ರಿಷಾ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ವೇಳೆ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಡಾ. ಜೋಸೆಫ್ ಲೋಬೊ ಅವರು ಮಕ್ಕಳಿಗೆ ಕೃಷಿ ಬಗ್ಗೆ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಸರ್ವಕಲಾ ಸೇವಾ ಟ್ರಸ್ಟ್ ಅಧ್ಯಕ್ಷರಾದ ನೀಮ ಲೋಬೊ ಮತ್ತು ಶಾಲಾ ಕಾಲೇಜು ವಿದ್ಯಾರ್ಥಿಗಳೊಂದಿಗೆ ಶಿಕ್ಷಕರು ಭಾಗವಹಿಸಿದ್ದರು.
