ಕೆ ಎಸ್ ಡಿ ಎಂ ಎ ನಿರ್ದೇಶಕರಾಗಿರಕ್ತದಾನಿ ಮಂಜು ಆಯ್ಕೆ

Spread the love

ಮೈಸೂರು: ಒಂದು ಹೆಜ್ಜೆ ರಕ್ತದಾನಿಗಳ ಬಳಗದ ಅಧ್ಯಕ್ಷ ಮೈಸೂರು ಜಿಲ್ಲೆಯ ರಕ್ತದಾನಿ ಮಂಜು ಅವರನ್ನು ಕರ್ನಾಟಕ ರಾಜ್ಯ ಡಿಜಿಟಲ್ ಮಾಧ್ಯಮ ಸಂಘದ
(ಕೆ ಎಸ್ ಡಿ ಎಂ ಎ) ನಿರ್ದೇಶಕರನ್ನಾಗಿ ನೇಮಿಸಲಾಗಿದೆ.

ಕೆ ಎಸ್ ಡಿ ಎಂ ಎ ಕರ್ನಾಟಕದ ಪ್ರಮುಖ ಸಂಸ್ಥೆಯಾಗಿದ್ದು, ಮುದ್ರಣ, ದೃಶ್ಯ ಮತ್ತು ಸಾಮಾಜಿಕ ಮಾಧ್ಯಮ ಸೇರಿದಂತೆ ವಿವಿಧ ಮಾಧ್ಯಮ ವೇದಿಕೆಗಳ ಮೂಲಕ ರಾಜ್ಯದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ವ್ಯವಹಾರಗಳ ಬಗ್ಗೆ ಪ್ರಮುಖ ಮಾಹಿತಿಯನ್ನು ಪ್ರಸಾರ ಮಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ.

ಈ ಸಂಸ್ಥೆಯು ಸರ್ಕಾರಿ ಕಲ್ಯಾಣ ಕಾರ್ಯಕ್ರಮಗಳು ಮತ್ತು ಉಪಕ್ರಮಗಳ ಪ್ರಚಾರವನ್ನು ಸಕ್ರಿಯವಾಗಿ ಬೆಂಬಲಿಸುತ್ತದೆ,ಇದೀಗ ರಕ್ತದಾನಿ ಮಂಜು ಅವರು ಸಂಸ್ಥೆಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ.