ನಂಜನಗೂಡು: ಚಲಿಸುತ್ತಿದ್ದ ಕೇರಳ ರಾಜ್ಯ ಸಾರಿಗೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಕರುಕಲಾದ ಘಟನೆ ನಂಜನಗೂಡಿನ ಹೊಸಳ್ಳಿ ಗೇಟ್ ಬಳಿ ನಡೆದಿದ್ದು ಅದೃಷ್ಟವಶಾತ್ ಪ್ರಯಾಣರು
ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬಸ್ ನಲ್ಲಿದ್ದ 40 ಕ್ಕೂ ಹೆಚ್ಚು ಪ್ರಯಾಣಿಕರಿದ್ದರು.
ಮೈಸೂರಿನಿಂದ ಕೇರಳಾಗೆ ತೆರಳುತ್ತಿದ್ದ KL15 A 2444 ನೊಂದಣಿ ಸಂಖ್ಯೆ ಬಸ್ ನಲ್ಲಿ ಮಧ್ಯರಾತ್ರಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ಎಚ್ಚೆತ್ತ ಚಾಲಕ ಹೊಸಳ್ಳಿ ಗೇಟ್ ಬಳಿ ನಿಲ್ಲಿಸಿ ಪ್ರಯಾಣಿಕರನ್ನ ಇಳಿಸಿದ್ದಾರೆ.ಹಾಗಾಗಿ ಭಾರೀ ಅನಾಹುತ ತಪ್ಪಿದಂತಾಗಿದೆ.
ಕೆಲವೇ ನಿಮಿಷಗಳಲ್ಲಿ ಬೆಂಕಿ ವ್ಯಾಪಿಸಿ ಬಸ್ ಸುಟ್ಟು ಕರುಕಲಾಗಿದೆ.ವಿಷಯ ತಿಳುದು ಅಗ್ನಿಶಾಮಕ ಸಿಬ್ಬಂದಿ ಬರುವ ಮುನ್ನವೇ ಬಸ್ ಸುಟ್ಟು ಕರುಕಲಾಗಿಬಿಟ್ಟಿದೆ.
ಕೇರಳಾ ರಾಜ್ಯಕ್ಕೆ ಸೇರಿದ ಬಸ್ ಸುಟ್ಟು ಹೋಗಿದ್ದು ಪ್ರಯಾಣಿಕರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಲಾಗಿದೆ.
ನಂಜನಗೂಡು ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡರು.
ಚಲಿಸುತ್ತಿದ್ದ ಬಸ್ ನಲ್ಲಿ ಬೆಂಕಿ-ಪ್ರಯಾಣಿಕರು ಪಾರು