ವಿಜಯನಗರ: ಲಾರಿಯನ್ನು ಓವರ್ ಟೇಕ್ ಮಾಡಲು ಹೋದ ಬಸ್ ಡ್ರೈವರ್ ನಿಯಂತ್ರಣ ಕಳೆದುಕೊಂಡು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನಲ್ಲಿ ನಡೆದಿದೆ.
ಕೂಡ್ಲಿಗಿ ತಾಲೂಕಿನ ಬಿಸ್ಟಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಅಪಘಾತ ನಡೆದಿದ್ದು, ಇಬ್ಬರು ಸಾವನ್ನಪ್ಪಿದರೆ 8 ಮಂದಿ ಗಾಯಗೊಂಡಿದ್ದಾರೆ.
ಮನೋಜ್ (28) ಮತ್ತು ಸುರೇಶ್ (45) ಮೃತಪಟ್ಟ ದುರ್ದೈವಿಗಳು, ಗಾಯಗೊಂಡವರನ್ನು ಕೂಡ್ಲಿಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೂಡ್ಲಿಗಿ ಡಿ ವೈ ಎಸ್ ಪಿ ಮಲ್ಲೇಶ್ ದೊಡ್ಮನಿ, ಕೊಟ್ಟೂರು ಸಿಪಿಐ ದುರುಗಪ್ಪ, ಮತ್ತು ಎಸ್ ಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾನಹೊಸಹಳ್ಳಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.