ಕುಲ್ಗಾಮ್ ನಲ್ಲಿ ಗುಂಡಿನ ಚಕಮಕಿ- ಐವರು ಉಗ್ರರು ಬಲಿ

Spread the love

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ನಲ್ಲಿ ಭದ್ರತಾ ಪಡೆ ಮತ್ತು ಭಯೋತ್ಪಾದಕರ ನಡುವೆ ನಡೆದ ಗುಂಡಿನ‌ ಚಕಮಕಿಯಲ್ಲಿ ಐವರು ಉಗ್ರರು ಬಲಿಯಾಗಿದ್ದಾರೆ.

ಇದೇ‌ ವೇಳೆ ಇಬ್ಬರು ಭದ್ರತಾ ಪಡೆ ಸಿಬ್ಬಂದಿ ಗಾಯಗೊಂಡಿದ್ದಾರೆ.

ಕುಲ್ಗಾಮ್ ಜಿಲ್ಲೆಯ ಬೆಹಿಬಾಗ್ ಪ್ರದೇಶದ ಕಡ್ಡರ್‌ನಲ್ಲಿ ಶಂಕಿತ ಭಯೋತ್ಪಾದಕರು ತಂಗಿರುವ ಬಗ್ಗೆ ಗುಪ್ತಚರ ಮಾಹಿತಿ ಪಡೆದ ಭದ್ರತಾ ಪಡೆ ಸಿಬ್ಬಂದಿ ಹಾಗೂ ಜಮ್ಮು ಕಾಶ್ಮೀರ ಪೊಲೀಸರು ಕಾರ್ಡನ್ ಮತ್ತು ಶೋಧ ಕಾರ್ಯ ಪ್ರಾರಂಭಿಸಿದ್ದರು.

ಗುರುವಾರ ಭಯೋತ್ಪಾದಕರು ಏಕಾಏಕಿ ಭದ್ರತಾ ಪಡೆಯ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಭದ್ರತಾ ಪಡೆಗಳು ಗುಂಡಿನ ದಾಳಿ ನಡೆಸಿ ಐವರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂದು ಎಕ್ಸ್‌ನಲ್ಲಿ ಚಿನಾರ್ ಕಾರ್ಪ್ಸ್ ತಿಳಿಸಿದೆ.