ಕುಂಭಮೇಳ ಕಾಲ್ತುಳಿತ ಪ್ರಕರಣ:ಅರ್ಜಿ ವಜಾ

Spread the love

ನವದೆಹಲಿ: ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ಡಿಸ್ಮಿಸ್ ಮಾಡಿದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ಪಿ.ವಿ ಸಂಜಯ್ ಕುಮಾರ್ ಅವರ ಪೀಠವು ಅರ್ಜಿ ವಿಚಾರಣೆ ನಡೆಸಿತು. ಕಾಲ್ತುಳಿತವು ದುರದೃಷ್ಟಕರ ಮತ್ತು ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದೆ.

ಅರ್ಜಿದಾರರು ಅಲಹಾಬಾದ್ ಹೈಕೋರ್ಟ್‌ಗೆ ಮನವಿ ಸಲ್ಲಿಸಬಹುದು ಎಂದು ಪೀಠ ತಿಳಿಸಿದೆ.

ದೇಶಾದ್ಯಂತ ಯಾತ್ರಾರ್ಥಿಗಳಿಗೆ ಸುರಕ್ಷತಾ ಕ್ರಮಗಳು ಮತ್ತು ಮಾರ್ಗಸೂಚಿಗಳನ್ನು ಜಾರಿಗೆ ತರಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಪಿಐಎಲ್ ಅನ್ನು ಪರಿಗಣಿಸಲು ಕೋರ್ಟ್‌ ನಿರಾಕರಿಸಿದೆ.

ಜ.29 ರಂದು ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿದ್ದರು. 60 ಕ್ಕೂ ಹೆಚ್ಚು ಭಕ್ತರು ಗಾಯಗೊಂಡಿದ್ದರು.ಈ ಹಿನ್ನೆಲೆಯಲ್ಲಿ ವಕೀಲ ವಿಶಾಲ್ ತಿವಾರಿ ಅವರು ಕ್ರಮ ಕೈಗೊಳ್ಳುವಂತೆ ಅರ್ಜಿ ಸಲ್ಲಿಸಿದ್ದರು.