ಮೈಸೂರು: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ನಗರದಲ್ಲಿ ಮಹಿಳಾ ಆಟೋ ಚಾಲಕಿಯರಿಗಾಗಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕೇಂದ್ರ ಸಂವಹನ ಇಲಾಖೆ ಮೈಸೂರು, ಎನ್ ಆರ್ ಫೌಂಡೇಶನ್, ತಳಿರು ಫೌಂಡೇಶನ್, ಜಿ ಐ ಝುಡ್ ಇಂಡಿಯಾ, ಐ ಡಿ ಎಫ್ ಸಿ ಫೌಂಡೇಶನ್ ವತಿಯಿಂದ ಈ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಮಹಿಳೆಯರನ್ನು ಸ್ವಾವಲಂಬಿಯನ್ನಾಗಿಸಲು ಈ ಸಂಸ್ಥೆಗಳು ಆಟೋ ಚಾಲನೆಗೆ ತರಬೇತಿ ನೀಡಿ ಬ್ಯಾಂಕ್ ನಿಂದ ಸಾಲ ಸೌಲಭ್ಯ ಪಡೆಯಲು ಮಾರ್ಗದರ್ಶನ ನೀಡಿ ಹೆಣ್ಣುಮಕ್ಕಳ ಬಾಳಲ್ಲಿ ಆಶಾಕಿರಣ ಮೂಡಿಸುತ್ತಿದೆ.
ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ತರಬೇತಿ ಪಡೆದ 15 ಮಹಿಳೆಯರಿಗೆ ಡ್ರೈವಿಂಗ್ ಲೈಸನ್ಸ್ ನೀಡಿ ಪ್ರೋತ್ಸಾಹಿಸಲಾಯಿತು.
ಸಂಸ್ಥೆಗಳ ಮುಖ್ಯಸ್ಥರಾದ ಎನ್ ಆರ್ ಗುರು , ಸುಲೋಚನಾ ಗುರು , ಚಿತ್ರಾ ಎ ಆರ್ , ನೀತು ಜೋಸೆಫ್, ಜಾನ್ಹವಿ ಮೂರ್ತಿ, ಎಸ್ ಬಿ ಐ ಬ್ಯಾಂಕ್ ವ್ಯವಸ್ಥಾಪಕರಾದ ಜಯಶ್ರೀ ಹಾಗೂ ಕೇಂದ್ರ ಸಂವಹನ ಇಲಾಖೆಯ ಶೃತಿ ಎಸ್ ಟಿ ಉಪಸ್ಥಿತರಿದ್ದರು.
